ದೊಡ್ಡಬಳ್ಳಾಪುರ: ಕೆಲ ದಿನಗಳ ಹಿಂದೆ ಸುರಿದ ಸತತ ಮಳೆಯಿಂದ ಬೆಳೆ ನಷ್ಟಕ್ಕೆ ಒಳಗಾಗಿರುವ ತಾಲೂಕಿನ ರೈತರು, ನಷ್ಟ ಪರಿಹಾರಕ್ಕಾಗಿ ತ್ವರಿತವಾಗಿ ಅರ್ಜಿ ಸಲ್ಲಿಸುವಂತೆ ತಹಶೀಲ್ದಾರ್ ಟಿ.ಎಸ್.ಶಿವರಾಜ್ ಸೂಚಿಸಿದ್ದಾರೆ.
ಬೆಳೆ ನಷ್ಟ ಪರಿಹಾರ ವಿತರಣೆ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು, ತಾಲೂಕಿನಲ್ಲಿ ಪ್ರಸ್ತುತ 400 ಮನೆ ಹಾನಿ, 8 ಸಾವಿರಕ್ಕು ಹೆಚ್ಚು ಬೆಳೆ ನಷ್ಟ ಪ್ರಕರಣದ ಅರ್ಜಿಗಳನ್ನು ನಮೂದಿಸಲಾಗಿದೆ.
ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಇನ್ನೂ ಅವಕಾಶವಿದ್ದು, ರೈತರು ಆಯಾ ವ್ಯಾಪ್ತಿಯ ಗ್ರಾಮಲೆಕ್ಕಾಧಿಕಾರಿ ಅಥವಾ ಕೃಷಿ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ ಅತಿ ಹೆಚ್ಚು ಅರ್ಜಿಗಳು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಮೂದಾಗಿದ್ದು, ಇನ್ನೂ ಅರ್ಜಿಗಳನ್ನು ನಮೂದಿಸಲಾಗುತ್ತಿದೆ. ಬಾಕಿ ಇರುವ ರೈತರು ತ್ವರಿತವಾಗಿ ಅರ್ಜಿ ಸಲ್ಲಿಸಬೇಕೆಂದು ಮನವಿ ಮಾಡಿದ್ದಾರೆ.
ಅರ್ಜಿ ಸಲ್ಲಿಕೆ ಬೇಕಾದ ದಾಖಲೆ: ಬೆಳೆ ನಷ್ಟದ ಪೊಟೋ, ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಹಾಗೂ ಪಾಣಿ ನೀಡಬಹುದಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….