ಬಿಬಿಎಂಪಿ ತ್ಯಾಜ್ಯದ ವಿರುದ್ದ ಹೋರಾಟ: ಮುಖಂಡರ ಬಂಧನ, ಬಿಡುಗಡೆ / ಸುದ್ದಿಗೋಷ್ಠಿ ನಡೆಸಿದ ಪ್ರಮುಖರು / ಬಿಬಿಎಂಪಿ ಜಂಟಿ ಆಯುಕ್ತರ ಅಮಾನತ್ತಿಗೆ ಆಗ್ರಹ

ದೊಡ್ಡಬಳ್ಳಾಪುರ: ತಾಲ್ಲೂಕಿನ ಚಿಗರೇನಹಳ್ಳಿಯ ಬಿಬಿಎಂಪಿ ಕಸ ವಿಲೇವಾರಿಯ ಎಂಎಸ್ಜಿಪಿ  ಘಟಕವನ್ನು ಬಂದ್ ಮಾಡುವಂತೆ ಸ್ಥಳೀಯರು ಮತ್ತೆ ಧರಣಿ ಪ್ರಾರಂಭಿಸದಂತೆ ಪೊಲೀಸರು ಭಾನುವಾರ ಇಡೀ ದಿನ ನಡೆಸಿದ ಹಲವಾರು ರೀತಿಯ ಕಸರತ್ತುಗನ್ನು ನಡೆಸಿ ಸ್ಥಳೀಯ ಮುಖಂಡರನ್ನು ಬಂಧಿಸಿ ಸಂಜೆ ವೇಳೆಗೆ ಬಿಡುಗಡೆ ಮಾಡಿದರು. 

ನಗರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧರಣಿಯ ನೇತೃತ್ವಹಿಸಿರುವ ನವ ಬೆಂಗಳೂರು ಹೋರಾಟ ಸಮಿತಿ ಗೌರವ ಅಧ್ಯಕ್ಷ ಕೆ.ವಿ.ಸತ್ಯಪ್ರಕಾಶ್, ಬಿಬಿಎಂಪಿ ಕಸ ಇಲ್ಲಿಗೆ ಬರದಂತೆ 10 ದಿನಗಳಿಂದಲು ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದವರನ್ನು ಪೊಲೀಸರು ಬಲಪ್ರಯೋಗ ನಡೆಸುವ ಮೂಲಕ ಶನಿವಾರ ಬಂಧಿಸಿದ್ದರು. ಆದರೂ ಸಹ ನಾವು ಭಾನುವಾರ ಕಸ ವಿಲೇವಾರಿ ಘಟಕದ ರಸ್ತೆಯುದ್ದಕ್ಕು ವಿವಿಧೆಡೆಗಳಲ್ಲಿ ಐದಾರು ಜನರು ಮಾತ್ರ ಕುಳಿತು ಧರಣಿ ನಡೆಸಲಾಗಿದೆ. ಧರಣಿ ನಿರತ ರೈತರಲ್ಲಿ ಭಯವನ್ನು ಉಂಟುಮಾಡುವ ಸಲುವಾಗಿ ಪೊಲೀಸರು ಹಲವಾರು ಜನರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಪಿಟ್ಟಿ ಕೇಸ್ಗಳನ್ನು ದಾಖಲಿಸಿ ಬಿಡುಗಡೆ ಮಾಡಿದ್ದಾರೆ. ಕಸ ಇಲ್ಲಿಗೆ ಬರುವುದು ನಿಲ್ಲುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು.

ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದ ರೈತರ ಮೇಲೆ ಹಲ್ಲೆ ನಡೆಸಿ ಹಲ್ಲು ಬೀಳುವಂತೆ ಮಾಡಿರುವ ಡಿವೈಎಸ್ಪಿ ನಾಗರಾಜ್ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು. ಕುಂಟುನೆಪಗಳನ್ನು ಹೇಳುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿರುವ ಜಿಲ್ಲಾಡಳಿತವೇ ಮುಂದಿನ ಅನಾಹುತಗಳಿಗೆ ಹೊಣೆಯಾಗಲಿದೆ. ಬಿಬಿಎಂಪಿ ಜಂಟಿ ಆಯಕ್ತ ಸರ್ಫೆಜ್ಖಾನ್ ಅವರ ಧರಣಿ ನಿರತರೊಂದಿಗೆ ಅನಾಗರೀಕ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಸೂಕ್ತ ರೀತಿಯಲ್ಲಿ ಕಸ ನಿರ್ವಹಣೆ ಮಾಡುವಿಲ್ಲ ವಿಫಲವಾಗಿರುವ ಜಂಟಿ ಆಯುಕ್ತರನ್ನು ಅಮಾನತು ಮಾಡಬೇಕು. ಎಂಎಸ್ಜಿಪಿ ಕಸ ವಿಲೇವಾರಿ ಘಟಕದಲ್ಲಿನ ಎಲ್ಲಾ ಅವ್ಯವಸ್ಥೆಗು ಬಿಬಿಎಂಪಿ ಜಂಟಿ ಆಯಕ್ತರೇ ನೇರ ಹೊಣೆಗಾರರಾಗಿದ್ದಾರೆ. ಇಲ್ಲಿನ ಅವ್ಯವಹಾರವನ್ನು ಎಸಿಬಿ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು. 

ಧರಣಿಯಲ್ಲಿ ಭಾಗವಹಿಸಿದ್ದವರನ್ನು ಶನಿವಾರ ಪೊಲೀಸರು ಬಂಧಿಸಿದಾಗ ಶಾಸಕರು ನಮ್ಮನ್ನು ಬಿಡಿಸಿಲ್ಲ. 10 ದಿನ ಧರಣಿ ಕುಳಿತ್ತಿದ್ರು ಒಮ್ಮೆಯು ಭೇಟಿ ಮಾಡದ ಶಾಸಕರು ಬಂಧಿತರನ್ನು ಬಿಡಿಸಿದ್ದು ನಾನೆ, ಧರಣಿಗೆ ನಮ್ಮ ಬೆಂಬಲ ಇದೆ ಎಂದು ಹೇಳಿರುವುದಕ್ಕೆ ಅರ್ಥವಿಲ್ಲ ಎಂದ ಕೆ.ವಿ.ಸತ್ಯಪ್ರಕಾಶ್, 2013ರಲ್ಲಿ ಟೆರ್ರಾಫರ್ಮ್ ಕಸ ವಿಲೇವಾರಿ ಘಟಕವನ್ನು ಮುಚ್ಚುವಂತೆ ಹೋರಾಟ ಮಾಡಿ ಬಂದ್ ಮಾಡಿಸಿದ್ದು ನಾವೇ ಹೊರತು ಶಾಸಕರಲ್ಲ. ಅವರದೇ ಪಕ್ಷದ ಸಿದ್ದರಾಮಯ್ಯ ಅವರು  ಮುಖ್ಯಮಂತ್ರಿಗಳಾಗಿದ್ದರು. ಹೀಗಾಗಿ ಸರ್ಕಾರಕ್ಕೆ ಕೆಟ್ಟ ಹರಸರು ಬರುತ್ತದೆ ಎನ್ನುವ ಉದ್ದೆಶದಿಂದ ನಮ್ಮ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಿದ್ದರು. ಈಗಲು ಸಹ ಅದನ್ನೇ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. 

ಕಸ ತಂದು ರಾಶಿಹಾಕುವ ಮೂಲಕ ಜರನ ಆರೋಗ್ಯ, ಇಲ್ಲಿನ ಪರಿಸರವನ್ನು ಹಾಳುಮಾಡುತ್ತಿರುವ ಬಿಬಿಎಂಪಿ ಈ ಭಾಗದ ಗ್ರಾಮಗಳ ಅಭಿವೃದ್ಧಿಗೆ ಅನುದಾನ ನೀಡಿತ್ತು. ಈ ಅನುದಾನ ಬಳಕೆಯಲ್ಲೂ ಅವ್ಯವಹಾರ ನಡೆದಿದೆ. ನಮಗೆ ಅನುದಾನವು ಬೇಡ, ಬಿಬಿಎಂಪಿ ಕಸ ಇಲ್ಲಿಗೆ ಬರುವುದೇ ಬೇಕಿಲ್ಲ ಎಂದರು.

ಬಂಧನ ಬಿಡುಗಡೆ: ಜಿಲ್ಲಾಡಳಿತದಿಂದ ಅನುಮತಿ ಪಡೆದ ನಂತರವೇ ಧರಣಿ ನಡೆಸಬೇಕು ಎನ್ನುವ ವಾದಮುಂದಿಟ್ಟುಕೊಂಡು ಭಾನುವಾರ ಧರಣಿಯ ಮುಂದಾಳತ್ವವಹಿಸಿದ್ದ ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಲಿಂಗಪ್ಪ, ಸದಸ್ಯ ಗಂಗಹನುಮಯ್ಯ, ರೈತ ರಂಗಪ್ಪ ಅವರನ್ನು ಬೆಳಿಗ್ಗೆಯೇ ಬಂಧಿಸಿ ನಗರದ ಪೊಲೀಸ್ ಠಾಣೆಯಲ್ಲಿಟ್ಟಿದ್ದರು. ಬಂದಿತರನ್ನು ಬಿಡಿಸಿಕೊಳ್ಳಲು ಬಂದ  ಕೆ.ವಿ.ಸತ್ಯಪ್ರಕಾಶ್, ಜಿ.ಎನ್.ಪ್ರದೀಪ್ ಅವರನ್ನು ಸಂಜೆ ಬಂಧಿಸಿ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ಕರೆದೊಯ್ದು ಪಿಟ್ಟಿಕೇಸ್ ದಾಳಿಸುವ ಮೂಲಕ ಬಿಡುಗಡೆ ಮಾಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ: ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಅವರನ್ನು ಭೇಟಿ ಮಾಡಿ ಇಲ್ಲಿನ ವಾಸ್ತವ ಸ್ಥಿಯನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡುವ ಸಿದ್ದತೆ ನಡೆಸಲಾಗಿದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!