ದೊಡ್ಡಬಳ್ಳಾಪುರ: ಶಾಸಕ ಟಿ.ವೆಂಕಟರಮಣಯ್ಯ ಅವರು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ 65ನೇ ಪರಿನಿರ್ವಾಣ ದಿನದ ಅಂಗವಾಗಿ ನಗರದ ಸಿದ್ದಲಿಂಗಯ್ಯ ವೃತ್ತದ ಸಮೀಪದಲ್ಲಿರುವ ಡಾ. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು, ಡಾ.ಅಂಬೇಡ್ಕರ್ ಅವರು ತಮ್ಮ ಬಾಲ್ಯದಲ್ಲಿ ಅಸ್ಪೃಶ್ಯತೆ, ಅಸಮಾನತೆ, ತಾರತಮ್ಯ ಅನುಭವಿಸಿದ್ದರು. ಅದರ ನೋವಿನ ನಡುವೆಯೇ ಶ್ರದ್ಧೆಯಿಂದ ವ್ಯಾಸಂಗ ಮಾಡಿ ಉನ್ನತ ಸ್ಥಾನ ಪಡೆದು ದೇಶಕ್ಕೆ ಸಂವಿಧಾನ ರಚಿಸಿದರು. ಸಂವಿಧಾನದಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ ಎಂದು ಹೇಳಿದರು.
ಈ ವೇಳೆ ಮುಖಂಡರಾದ ಜಿ.ಲಕ್ಷ್ಮೀಪತಿ, ಕೆ.ಪಿ.ಜಗನಾಥ್, ಆಂಜನಮೂರ್ತಿ, ಮುನಿರಾಜು, ರಾಮಾಂಜಿನಪ್ಪ, ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕ ಸೋಮಶೇಖರ್, ಭೀಮಣ್ಣ, ಶ್ರೀನಗರ ಬಶೀರ್ ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….