ನವದೆಹಲಿ: ಕರೊನಾ ಸೋಂಕು ಹರಡದಂತೆ ತಡೆಗಟ್ಟಲು ದೇಶದಲ್ಲಿ ಲಸಿಕಾ ಅಭಿಯಾನ ಶುರು ಮಾಡಿದ್ದು, ಜನರಿಗೆ ಉಚಿತ ವ್ಯಾಕ್ಸಿನ್ ಹಾಕಲಾಗುತ್ತಿದೆ. ಈ ಮಧ್ಯೆ ಲಸಿಕಾ ಅಭಿಯಾನದಲ್ಲಿ ಭಾರತ ಇದೀಗ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ.
ಇತ್ತೀಚೆಗಷ್ಟೆ 100 ಕೋಟಿ ಜನರಿಗೆ ಮೊದಲ ಡೋಸ್ ಲಸಿಕೆ ಪೂರ್ಣಗೊಳಿಸಲಾಗಿತ್ತು. ಇದೀಗ ದೇಶದ ಶೇ.50ರಷ್ಟು ಜನರಿಗೆ ಎರಡು ಡೋಸ್ ಲಸಿಕೆ ಪೂರ್ಣಗೊಳಿಸಲಾಗಿದೆ. ಈ ಲಸಿಕೆ ಅಭಿಯಾನ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ದೇಶದ ಶೇ.50ರಷ್ಟು ಜನರಿಗೆ ಎರಡೂ ಡೋಸ್ ಪೂರ್ಣಗೊಳಿಸಲಾಗಿದೆ. ಅರ್ಧ ಭಾರತಕ್ಕೆ ಸಂಪೂರ್ಣ ಲಸಿಕಾಕರಣ ಮಾಡಲಾಗಿದೆ. ಈ ಮೂಲಕ ಲಸಿಕೆ ಅಭಿಯಾನದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲಾಗಿದೆ ಎಂದಿದ್ದಾರೆ.
ಇದು ನಮ್ಮ ಸಂಭ್ರಮವನ್ನ ಮತ್ತಷ್ಟು ಇಮ್ಮಡಿಗೊಳಿಸಿದೆ. ಮಾಸ್ಕ್ , ಸಾಮಾಜಿಕ ಅಂತರ ಮರೆಯದಿರೋಣ. ಕರೊನಾ ನಿಯಮ ಪಾಲಿಸೋಣ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….