ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2021-22ನೇ ಸಾಲಿಗೆ ವಿವಿಧ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ವಾಸವಿರುವ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವವರು ಅರ್ಜಿಯನ್ನು ವೆಬ್‍ಸೈಟ್ kacdc.karnataka.gov.in ನಲ್ಲಿ ಆನ್‍ಲೈನ್ ಮೂಲಕ 2022ರ ಜನವರಿ 18 ರೊಳಗೆ ಸಲ್ಲಿಸುವುದು.
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದು, 2021-22ನೇ ಸಾಲಿನಲ್ಲಿ ನವೀಕರಣಕ್ಕಾಗಿ ಅರ್ಜಿಯನ್ನು ಸುವಿಧಾ ತಂತ್ರಾಂಶದ ಮೂಲಕ https://suvidha.karnataka.gov.in 2021ರ ಡಿಸೆಂಬರ್ 18 ರಿಂದ 2022ರ ಜನವರಿ 31 ರೊಳಗೆ ಸಲ್ಲಿಸುವುದು.
ಮಹಿಳೆಯರಿಗೆ ಶೇ. 33% ಹಾಗೂ ವಿಕಲಚೇತನರಿಗೆ ಶೇ. 5%ರಷ್ಟು ಮೀಸಲಾತಿ ಇರುತ್ತದೆ. ಫಲಾನುಭವಿಗಳ ಆಧಾರ್ ಸಂಖ್ಯೆ ಮೊಬೈಲ್ ಸಂಖ್ಯೆಗೆ ಜೋಡಣೆಯಾಗಿರಬೇಕು ಹಾಗೂ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆಗೆ ಜೋಡಣೆಯಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ, ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ(ನಿ), #101, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110, ವೆಬ್‍ಸೈಟ್: kacdc.karnataka.gov.in ವೆಬ್‍ಸೈಟ್ ಹಾಗೂ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ: 080-29605769 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ(ನಿ)ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….