News Update ಬಗೆಹರಿಯದ ಬಿಬಿಎಂಪಿ ಕಸ ಸಮಸ್ಯೆ: ಮುಖ್ಯಮಂತ್ರಿಗಳ ಬಳಿನಿಯೋಗದ ಭರವಸೆ ನೀಡಿದ ಸಚಿವ ಎಂ.ಟಿ.ಬಿ.ನಾಗರಾಜ್ / ಭರವಸೆ ಈಡೇರದಿದ್ದರೆ ಚುನಾವಣೆ ನಂತರ ಮತ್ತೆ ಹೋರಾಟ

ದೊಡ್ಡಬಳ್ಳಾಪುರ: ತಾಲೂಕಿನ ಚಿಗರೇನಹಳ್ಳಿಯಲ್ಲಿನ ಎಂಎಸ್‍ಜಿಪಿ ಕಸ ವಿಲೇವಾರಿ ಘಟಕದಿಂದ ಉಂಟಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ನಮಗೆ ಮನವರಿಕೆಯಾಗಿದ್ದು, ಒಂದೇ ದಿನದಲ್ಲಿ ಸಮಸ್ಯೆ ಬಗೆಹರಿಸಲಾಗುವುದಿಲ್ಲ. ವಿಧಾನಪರಿಷತ್ ಚುನಾವಣೆಯ ನಂತರ ಸ್ಥಳೀಯ ಮುಖಂಡರೊಂದಿಗೆ ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಿ ಸಭೆ ನಡೆಸಿ, ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಪೌರಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಹೇಳಿದರು.

ತಾಲೂಕಿನ ಚಿಗರೇನಹಳ್ಳಿಯಲ್ಲಿನ ಬಿಬಿಎಂಪಿ ಕಸ ವಿಲೇವಾರಿಯ ಎಂಎಸ್‍ಜಿಪಿ  ಘಟಕವನ್ನು ಮುಚ್ಚುವಂತೆ, ತಾಲೂಕಿನ ಮೂಗೇನಹಳ್ಳಿ ಬಾರೆ ಬಳಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಗ್ರಾಮಸ್ಥರು ನಡೆದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ಇದಕ್ಕೂ ಮುನ್ನ ಎಂಎಸ್‍ಜಿಪಿ ಕಸ ವಿಲೇವಾರಿ ಘಟಕಕ್ಕೆ ಶಾಸಕರು, ಜಿಲ್ಲಾಧಿಕಾರಿ ಹಾಗೂ ಬಿಬಿಎಂಪಿ ಅಕಾರಿಗಳೊಂದಿಗೆ ಭೇಟಿ ನೀಡಿ, ಕಸ ವಿಲೇವಾರಿ ಬಗ್ಗೆ ಮಾಹಿತಿ ಪಡೆದರು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಾ.ಕೋನ ವಂಶಿಕೃಷ್ಣ, ಡಿವೈಎಸ್ಪಿ ನಾಗರಾಜ್, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ತಹಶೀಲ್ದಾರ್ ಟಿ.ಎಸ್ ಶಿವರಾಜ್, ಬಿಬಿಎಂಪಿ ಘನ ತ್ಯಾಜ್ಯ ನಿರ್ವಹಣೆ ವಿಶೇಷ ಆಯುಕ್ತ ಸರ್ಫರಾಜ್ ಮೊದಲಾದವರಿದ್ದರು.

ನಮಗೆ ಕಸ ಭೇಡವೇ ಬೇಡ: ನಂತರ ಸಚಿವರು ಸ್ಥಳಕ್ಕೆ ಆಗಮಿಸಿದ ವೇಳೆ, ಕಸದಿಂದ ಆಗುತ್ತಿರುವ ಸಮಸ್ಯೆಗಳ ಕುರಿತು ಗ್ರಾಮಸ್ಥರು ಗಮನ ಸೆಳೆದರು. ಭಕ್ತರ ಹಳ್ಳಿ ಗ್ರಾ.ಪಂ ಸದಸ್ಯ ಲತಾಶ್ರೀ ಮಾತನಾಡಿ, ಎಂಎಸ್‍ಜಿಪಿ ಘಟಕದಿಂದಾಗಿ ಇಲ್ಲಿ ಜನರು ವಾಸಿಸಲು ಆಗದೇ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚೆಗೆ ಸುರಿದ ಮಳೆಯಿಂದಾಗಿ ಘಟಕದ ಕಸದ ನೀರು, ಮಳೆ ನೀರಿಗೆ ಸೇರಿ, ಕೆರೆ ಕುಂಟೆ ಕಾಲುವೆಗಳಲ್ಲಿ ವಿಷಕಾರಿ ನೀರು ಹರಿಯುತ್ತಿದೆ. ಇದರಿಂದ ಪ್ರಾಣಿಗಳು ಹಾಗೂ ಮನುಷ್ಯರಿಗೆ ವಿವಿಧ ರೋಗ ರುಜಿನಗಳು ಬಾಧಿಸುತ್ತಿವೆ ರಾಸಾಯನಿಕ ಹಾಗೂ  ವೈದ್ಯಕೀಯ ತ್ಯಾಜ್ಯಗಳನ್ನು ಸಹ ಹಳ್ಳಗಳಲ್ಲಿ ತಂದು ಸುರಿಯಲಾಗುತ್ತಿದ್ದು, ಇದು ಸುತ್ತಮುತ್ತಲ ಅಂತರ್ಜಲಕ್ಕೆ ಸೇರಿದೆ. ಕಾಲುವೆಗಳಲ್ಲಿ ವಿಷಯುಕ್ತ ನೀರು ಹರಿಯುತ್ತಿವೆ. ಮಹಿಳೆಯರಿಗೆ ಗರ್ಭಪಾತದ ಸಮಸ್ಯೆಗಳು, ಮಕ್ಕಳಿಗೆ ಹಾಗೂ ವೃದ್ದರಿಗೆ ವಿವಿಧ ರೋಗ ರುಜಿನಗಳು ಹೆಚ್ಚಾಗುತ್ತಿದ್ದು, ಇಲ್ಲಿನ ಜರನ್ನು ನಿಕೃಷ್ಟವಾಗಿ ನೋಡುವಂತಾಗಿದೆ ಎಂದರು.

ಸ್ವಾಮಿ ನಮ್ಮ ಗ್ರಾಮದ ಹಳ್ಳಿಗಳ ಯುವಕರಿಗೆ ಹೆಣ್ಣು ಕೊಡಲು ಯಾರೂ ಬರುತ್ತಿಲ್ಲ. ಶಾಲೆಗಳಲ್ಲಿ ಮಕ್ಕಳು ಬಿಸಿಯೂಟ ಮಾಡಲಾಗುತ್ತಿಲ್ಲ. ವಿಷಕಾರಿ ತ್ಯಾಜ್ಯ ನೀರು ಅಂತರ್ ಜಲಕ್ಕೆ ಮಾರಕವಾಗಿದೆ. ಕೊಳವೆ ಬಾವಿಗಳಲ್ಲಿಯೂ ವಿಷಕಾರಿ ನೀರು ಬರುವುದು ಜನರನ್ನು ಭಯಭೀತರನ್ನಾಗಿಸಿದೆ. ಎಂಎಸ್‍ಜಿಪಿ ಘಟಕವನ್ನೂ ಹಂತ ಹಂತವಾಗಿ ನಿಲ್ಲಿಸಲಾಗುವುದು ಎಂದು ಈ ಹಿಂದೆ ನೀಡಿದ್ದ ಭರವಸೆಗಳಲ್ಲಾ ಹುಸಿಯಾಗಿವೆ. ಇಲ್ಲಿನ ಜನರೂ ಮನುಷ್ಯರೇ ನಿಮ್ಮ ಯಾವ ಭರವಸೆಗಳು ಬೇಡ ಎಂದು ನೆರೆದಿದ್ದ ಗ್ರಾಮಸ್ಥರು, ಸಚಿವರೊಂದಿಗೆ ಏರುದನಿಯಲ್ಲಿ ನುಡಿದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಎಂಎಸ್‍ಜಿಪಿ ಕಸ ವಿಲೇವಾರಿ ಘಟಕದಿಂದ ಆಗುತ್ತಿರುವ ದುಷ್ಪರಿಣಾಮಗಳಾಗುತ್ತಿರುವ ಕುರಿತು ಸಂಬಂಧ ಪಟ್ಟವರ ಗಮನಕ್ಕೆ ತರಲಾಗಿದೆ. 2019ರಲ್ಲಿ ಟೆರ್ರಾಫರ್ಮಾ ಘಟಕದ ವಿರುದ್ದ ಹೋರಾಟ ಮಾಡಿದಾಗ  ಅಂದು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಆರ್.ಅಶೋಕ್ ಭರವಸೆ ನೀಡಿದಂತೆ ಘಟಕವನ್ನು ಸ್ಥಗಿತಗೊಳಿಸಲಾಗಿತ್ತು. ಆಗ ಎಂಎಸ್‍ಜಿಪಿ ಸಹ ನಿಲ್ಲಿಸಲು ಭರವಸೆ ನೀಡಿದ್ದರು. ಆದರೆ ಈಡೇರಲಿಲ್ಲ. 50ರಿಂದ 60 ಲಾರಿ ಬದಲು 200 ರಿಂದ 300 ಲಾರಿಗಳು ಬರುತ್ತಿವೆ. ಅವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲಾಗುತ್ತಿದ್ದು, 80 ಗ್ರಾಮಗಳ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಇಲ್ಲಿ ದಿಢೀರ್ ಭೇಟಿ ನೀಡಿ ಪರಿಸ್ಥಿತಿ ತಿಳಿಯಿರಿ. ನಿಮ್ಮ ಕಾಲಿಗೆ ಬೇಕಾದರೂ ಬೀಳುತ್ತೇವೆ ಘಟಕವನ್ನು ಬಂದ್ ಮಾಡಿಸಿ ಎಂದು ಸಚಿವರಲ್ಲಿ ಮನವಿ ಮಾಡಿ, ಮನವಿ ಪತ್ರ ಸಲ್ಲಿಸಿದರು.

ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ಕರವೇ ಕನ್ನಡಿಗರ ಬಣದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಮಾತನಾಡಿ, ದೊಡ್ಡಬಳ್ಳಾಪುರ ಹೋರಾಟಗಾರರ ತವರೂರು ಯಾವುದೇ ಕಾರಣಕ್ಕೂ ಹೋರಾಟ ಹಿಂಪಡೆಯುವುದಿಲ್ಲ. ಎಂಎಸ್‍ಜಿಪಿ ಘಟಕ ಸ್ಥಗಿತ ಮಾಡಲೇ ಬೇಕಾಗಿದ್ದು, ಹೋರಾಟಕ್ಕ ನಮ್ಮ ಸಂಘಟನೆಗಳ ಬೆಂಬಲವಿದೆ ಎಂದರು.

ಮುಖ್ಯಮಂತ್ರಿಗಳ ಬಳಿ ನಿಯೋಗ: ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಎಂ.ಟಿ.ಬಿ.ನಾಗರಾಜ್, ಘಟಕ 14 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು, ಒಂದೆರಡು ದಿನಕ್ಕೆ ನಿಲ್ಲಿಸಲು ಅಸಾಧ್ಯ. ನಾವೇ ಆಗಲೀ ನಿಮ್ಮ ಶಾಸಕರೇ ಆಗಲೀ ಮುಖ್ಯಮಂತ್ರಿಗಳಾದರೂ ಸಹ ಯಾರಿಂದಲೂ ಆಗುವುದಿಲ್ಲ. ನಾವು ರಾಜಕೀಯಕ್ಕೆ ಬರುವುದು ಜನರ ಹಿತ ಬಯಸಿ ಸೇವೆ ಮಾಡಲು.

ಸೂಕ್ತ ನಿರ್ವಹಣೆ ಕೊರತೆ ಹಾಗೂ ಮಳೆ ಹೆಚ್ಚಾಗಿದ್ದರಿಂದ ಸಮಸ್ಯೆ ಉಂಟಾಗಿದೆ. ಘಟಕದಲ್ಲಿ ನಿಯಮಬಾಹಿರವಾಗಿ  ಮಾಡುತ್ತಿರುವ ಸೂಕ್ತ ನಿರ್ವಹಣೆಗೆ ಅಗತ್ಯವಿರುವ ಕ್ರಮ ಕೈಗೊಳ್ಳುವ ಬಗ್ಗೆ ಬಿಬಿಎಂಪಿ ಹಾಗೂ ಎಂಎಸ್‍ಜಿಪಿ ಕಸ ವಿಲೇವಾರಿ ಘಟಕದವರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಘಟಕದ ಮಾಲೀಕರ ಮೇಲೆ ಪೊಲೀಸರಿಂದ ಎಫ್‍ಐಆರ್ ದಾಖಲಿಸಲಾಗಿದೆ. ಮುಖ್ಯಮಂತ್ರಿಗಳು ಚುನಾವಣಾ ಪ್ರಚಾರದಲ್ಲಿದ್ದಾರೆ. ಈಗ ಚುನಾವಣೆ ನೀತಿ ಸಂಹಿತೆ ಇದೆ. ಇಲ್ಲಿನ ಸಮಸ್ಯೆ ಕುರಿತು, ಜಿಲ್ಲಾಕಾರಿಗಳು, ಬಿಬಿಎಂಪಿ ಅಧಿಕಾರಿಗಳು ಹಾಗೂ ಇಲ್ಲಿನ ಮುಖಂಡರ ನಿಯೋಗ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವ ಕುರಿತಂತೆ ಚರ್ಚಿಸಲಾಗುವುದು. ಇಲ್ಲಿ ಕಸದ ಲಾರಿಗಳನ್ನು ತಡೆ ಹಿಡಿಯಲಾಗಿದೆ. ಅಲ್ಲಿ ನಗರದಲ್ಲಿ ಕಸ ವಿಲೇವಾರಿ ಆಗದೇ ಪ್ರತಿಭಟನೆ  ಮಾಡಲಾಗುತ್ತಿದೆ. ದಯವಿಟ್ಟು ಕಸದ ಲಾರಿಗಳನ್ನು ಬಿಡಲು ವ್ಯವಸ್ಥೆ ಮಾಡಿ. ಧರಣಿಯನ್ನು ಹಿಂದಕ್ಕೆ ಪಡೆಯಿರಿ ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಟಿಎಪಿಎಂಸಿಎಸ್ ಅಧ್ಯಕ್ಷ ಸಿದ್ದರಾಮಯ್ಯ, ತಾಪಂ ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಕರವೇ ಪ್ರವೀಣ್ ಶೆಟ್ಟಿಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ, ಕನ್ನಡಿಗರ ಬಣದ ಚಂದ್ರಶೇಖರ್, ಬಿಎಸ್‍ಪಿ ರಾಜ್ಯ ಮುಖಂಡ ಪುರುಷೋತ್ತಮ್, ಬಿಜೆಪಿ ಮುಖಂಡ ಕೆ.ಟಿ.ಕೃಷ್ಣಪ್ಪ, ಮುಖಂಡರಾದ ರಾಮಣ್ಣ, ಪು.ಮಹೇಶ್, ಬಶೀರ್, ನಂಜಪ್ಪ, ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಬಿಗಿ ಪೊಲೀಸ್ ಬಂದೋಬಸ್ತ್: ಮಾರ್ಷಲ್‍ಗಳ ಮೇಲೆ ಕೆರಳಿದ ಪ್ರತಿಭಟನಾಕಾರರು ತಾಲೂಕಿನ ಗುಂಡ್ಲಹಳ್ಳಿ ಕ್ರಾಸ್ ಬಳಿ ಪೊಲೀಸರು ಸೆ.144  ನಿಷೇಧಾಜ್ಞೆ ವಿಸಿರುವುದರಿಂದ ಪ್ರತಿಭಟನೆ ಸ್ಥಳವನ್ನು ಮೂಗೇನಹಳ್ಳಿ ಬಾರೆ ಬಳಿ ಪ್ರತಿಭಟನೆ ನಡೆಸಲಾಯಿತು ಎನ್ನಲಾಗಿದೆ. ಈ ನಡುವೆ ಶನಿವಾರ ಮತ್ತು ಭಾನುವಾರ ನಡೆದ ವಿದ್ಯಮಾನಗಳ ಹಿನ್ನಲೆಯಲ್ಲಿ ಸೋಮವಾರ ಮೂಗೇನಹಳ್ಳಿ ಬಾರೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಆದರೆ ಬಿಬಿಎಂಪಿ ಮಾರ್ಷಲ್‍ಗಳು ಸ್ಥಳದಲ್ಲಿದ್ದುದನ್ನು ಕಂಡು ಕೆರಳಿದ ಪ್ರತಿಭಟನಾಕಾರರು, ಪೊಲೀಸರಿಗೆ ಮಾತ್ರ ಕಾನೂನು ಸುವ್ಯವಸ್ಥೆ ಕಾಪಾಡುವ ಹೊಣೆಯಿದೆ. ಪೊಲೀಸರ ಮೇಲೆ ನಮಗೆ ನಂಬಿಕೆ ಇದೆ. ಇಲ್ಲಿ ಬಿಬಿಎಂಪಿ ಮಾರ್ಷಲ್ ಕರೆಸುವ ಅನಿವಾರ್ಯತೆ ಏನಿದೆ. ಮೊದಲು ಅವರನ್ನು ಬೆಂಗಳೂರಿಗೆ ಕಳಿಸಿ ಎಂದು ಬಿಬಿಎಂಪಿ ಅಧಿಕಾರಿಗಳ ವಿರುದ್ದ ಘೋಷಣೆಗಳನ್ನು ಕೂಗಿದರು.

ಭರವಸೆ ಈಡೇರದಿದ್ದರೆ ಚುನಾವಣೆ ನಂತರ ಹೋರಾಟ: ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಚುನಾವಣೆ ನಂತರ ಮುಖ್ಯಮಂತ್ರಿಗಳ ಬಳಿ ತೆರಳಿ ಸಭೆ ನಡೆಸುವುದಾಗಿ ಹೇಳಿದ್ದಾರೆ.ನಾವು ಕಾನೂನನ್ನು ಗೌರವಿಸಬೇಕು. ಮುಖ್ಯಮಂತ್ರಿಗಳ ಸಭೆಯಲ್ಲಿ ನಮಗೆ ಘಟಕ ನಿಲ್ಲಿಸುವ ಕುರಿತು, ಧನಾತ್ಮಕ ಪ್ರತಿಕ್ರಿಯೆ ಬರಬೇಕು. ಇಲ್ಲವಾದಲ್ಲಿ ಮತ್ತೆ ಎಂಎಸ್‍ಜಿಪಿ ಕಸ ವಿಲೇವಾರಿ ಘಟಕದ ವಿರುದ್ದ ಹೋರಾಟ ಆರಂಭಿಸಲಾಗುವುದು ಎಂದು ಧರಣಿಯಲ್ಲಿ ಭಾಗವಹಿಸಿದ್ದ ವಿವಿಧ ಸಂಘಟನೆಗಳ ಮುಖಂಡರು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!