ದೊಡ್ಡಬಳ್ಳಾಪುರ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ತಾಲೂಕಿನ ಬಚ್ಚಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ / ಕಾಲೇಜಿನಲ್ಲಿ ಭೌತಶಾಸ್ತ್ರ, ಗಣಿತ ವಿಷಯಕ್ಕೆ ಅತಿಥಿ ಶಿಕ್ಷಕರು ಹಾಗೂ ಒಂದು ಸ್ಟ್ಯಾಫ್ ನರ್ಸ್ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಭೌತಶಾಸ್ತ್ರ ಉಪನ್ಯಾಸಕ ಹುದ್ದೆಗೆ ಎಂ.ಎಸ್ಸಿ( ಭೌತಶಾಸ್ತ್ರ) ಮತ್ತು ಬಿ.ಎಡ್ ಪದವಿ, ಗಣಿತ ಶಿಕ್ಷಕರ ಹುದ್ದೆಗೆ ಬಿಎಸ್ಸಿ(ಪಿಸಿಎಂ) ನೊಂದಿಗೆ ಬಿ.ಎಡ್ ಪದವಿ ಹಾಗೂ ಸ್ಟಾಫ್ ನರ್ಸ್ ಹುದ್ದೆಗೆ ಎ.ಎನ್.ಎಂ/ ಜಿ.ಎನ್.ಎಂ/ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರಬೇಕು.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸರ್ಕಾರ ನಿಗದಿಪಡಿಸಿದ ವೇತನದೊಂದಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….