ದೊಡ್ಡಬಳ್ಳಾಪುರ: ನಗರದ ತಾಯಿ ಮಗು ಸಮೀಪವಿರುವ ಸಖಿ ಕೇಂದ್ರಕ್ಕೆ ಪರಿಕರಗಳ ವಿತರಣೆ ಹಾಗೂ ಅಪೌಷ್ಟಿಕ ಮಕ್ಕಳಿಗೆ ಸ್ಪಿರುಲಿನಾ ಚಿಕ್ಕಿ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸೇವ್‌ದಿ ಚಿಲ್ಡ್ರನ್ ಸಂಸ್ಥೆ, ಐಕಿಯಾ ಸಂಸ್ಥೆ ಹಾಗೂ ಸ್ಪಿರುಲಿನಾ ಫೌಂಡೇಷನ್ ಸಹಯೋಗದಲ್ಲಿ ಡಿಸೆಂಬರ್ 7ರಂದು ಬೆಳಿಗ್ಗೆ 10:00 ಗಂಟೆಗೆ ಸಖಿ ಕೇಂದ್ರಕ್ಕೆ ಪರಿಕರಗಳ ವಿತರಣೆ ಹಾಗೂ ಅಪೌಷ್ಟಿಕ ಮಕ್ಕಳಿಗೆ ಸ್ಪಿರುಲಿನಾ ಚಿಕ್ಕಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಒ ಅನಿತಾಲಕ್ಷ್ಮೀ ಅವರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….