ಮೇಷ: ಈ ರಾಶಿಯವರಿಗೆ ಸಾಂಸಾರಿಕವಾಗಿ ಕಿರಿ ಕಿರಿ ಇದ್ದರೂ ತಾಳ್ಮೆಯಿಂದ ನಡೆದುಕೊಳ್ಳುವುದು ಮುಖ್ಯ. ದುಡುಕಿ ಮಾತನಾಡಿ ಸಂಬಂಧ ಹಾಳುಮಾಡಿಕೊಳ್ಳಬೇಡಿ. ಆಸ್ತಿ ವಿಚಾರವಾಗಿ ಸಹೋದರರೊಂದಿಗೆ ವಾಗ್ವಾದವಾಗಬಹುದು. ಎಚ್ಚರಿಕೆಯಿಂದಿರಿ. ಉದ್ಯೋಗದಲ್ಲಿ ಮುನ್ನಡೆಯಿರಲಿದೆ.
ವೃಷಭ: ಈ ರಾಶಿಯವರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅಧಿಕ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಅವಿವಾಹಿತರಿಗೆ ವಿವಾಹ ಪ್ರಯತ್ನಗಳಿಗೆ ಫಲ ದೊರೆಯುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಸಾಮಾಜಿಕವಾಗಿ ಸ್ಥಾನ ಮಾನ ಉತ್ತಮಗೊಳ್ಳುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಮಿಥುನ: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆಯಿಂದಿರುವುದು ಅಗತ್ಯ. ಅಂದುಕೊಂಡ ಕೆಲಸ ಕಾರ್ಯಗಳಿಗೆ ವಿಘ‍್ನಗಳು ಎದುರಾಗಬಹುದು. ತಾಳ್ಮೆ ಕಳೆದುಕೊಳ್ಳಬೇಡಿ.
ಕಟಕ: ಈ ರಾಶಿಯವರಿಗೆ ಉದ್ಯೋಗ ಕ್ಷೇತ್ರದಲ್ಲಿ ವಿರೋಧಿಗಳಿಂದ ತೊಂದರೆಗಳು ಎದುರಾದೀತು. ಆದರೆ ಸಹನೆಯಿಂದ ಎದುರಿಸುವಿರಿ. ಮಾತಿನಲ್ಲಿ ಸಂಯಮವಿದ್ದರೆ ನಿಮ್ಮನ್ನು ಯಾರೂ ಸೋಲಿಸಲಾಗದು. ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡುಬರುವುದು.
ಸಿಂಹ: ಈ ರಾಶಿಯವರು ಸಣ್ಣ ಪುಟ್ಟ ಕಾರ್ಯಗಳಲ್ಲಿ ವಿಘ್ನಗಳು ಎದುರಾದರೂ ಕ್ರಿಯಾಶೀಲತೆಯಿಂದ ಎಲ್ಲವನ್ನೂ ಮೆಟ್ಟಿ ನಿಲ್ಲಲಿದ್ದೀರಿ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದಿರುವುದು ಅಗತ್ಯ. ಉದರ ಸಂಬಂಧೀ ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಕನ್ಯಾ: ಈ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ಮನಸ್ಸಿಗೆ ಬೇಸರವಾಗಲಿದೆ. ಮನೆಗೆ ಅತಿಥಿಗಳ ಆಗಮನವಾಗಲಿದ್ದು, ಅಧಿಕ ಓಡಾಟ ನಡೆಸಬೇಕಾಗುತ್ತದೆ. ಚಾಡಿ ಮಾತುಗಳಿಗೆ ಕಿವಿಗೊಡಬೇಡಿ.
ತುಲಾ: ಈ ರಾಶಿಯವರಿಗೆ ಸರಕಾರಿ ಕೆಲಸಗಳಲ್ಲಿ ಜಯ ಸಿಗುವುದು. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯವ ಭಾಗ್ಯವಿದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೆಚ್ಚಿನ ಸಹಕಾರ ಸಿಗುವುದು. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು.
ವೃಶ್ಚಿಕ: ಈ ರಾಶಿಯವರು ನೀರಿಗಾಗಿ ನೆರೆಹೊರೆಯವರೊಂದಿಗೆ ವಾಗ್ವಾದವಾಗುವ ಸಾಧ‍್ಯತೆಯಿದೆ. ತಾಳ್ಮೆಯಿಂದಿರಿ. ಹೊಸ ಬಂಡವಾಳ ಹೂಡಿಕೆಯಲ್ಲಿ ಲಾಭ ಕಂಡುಬರುವುದು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗುವುದು.
ಧನಸ್ಸು: ಈ ರಾಶಿಯವರು ಮಾನಸಿಕವಾಗಿ ಸಂತಸವಿದ್ದರೂ ದೇಹಾರೋಗ್ಯದ ಬಗ್ಗೆ ಉಪೇಕ್ಷೆಬೇಡ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಬೇಕಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯತನ ಕಂಡುಬಂದೀತು. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾಗಬಹುದು. ದೇವತಾ ಪ್ರಾರ್ಥನೆ ಮಾಡಿ.
ಮಕರ: ಈ ರಾಶಿಯವರು ಹಂತ ಹಂತವಾಗಿ ಅಂದುಕೊಂಡಂತೆ ಅಭಿವೃದ್ಧಿ ಗೋಚರಕ್ಕೆ ಬರುವುದು. ಗೃಹೋಪಯೋಗಿ ವಸ್ತುಗಳಿಗಾಗಿ ಹೆಚ್ಚಿನ ಧನವ್ಯಯಮಾಡುವಿರಿ. ಹಿರಿಯರ ಮಾತಿಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ.
ಕುಂಭ: ಈ ರಾಶಿಯವರು ಮಕ್ಕಳೊಂದಿಗೆ ಸಂತೋಷದ ಕ್ಷಣ ಕಳೆಯುವಿರಿ. ಬಂಧು ಮಿತ್ರರ ಆಗಮನವಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ಅವಿವಾಹಿತರಿಗೆ ಶೀಘ್ರ ಕಲ್ಯಾಣ ಯೋಗವಿದೆ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ.
ಮೀನ: ಈ ರಾಶಿಯವರಿಗೆ ದೂರ ಪ್ರಯಾಣ ಸಂಭವವಿದೆ. ಎಚ್ಚರಿಕೆ ಅಗತ್ಯ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನದಿಂದ ಒಂದು ರೀತಿಯ ಸಂಭ್ರಮದ ವಾತಾವರಣವಿರಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು.
ಸಂವತ್ಸರ: ಶ್ರೀ ಪ್ಲವ ನಾಮ ಸಂವತ್ಸರ
ಆಯನ: ದಕ್ಷಿಣಾಯನ
ಋತು: ಹಿಮಂತ ಋತು
ಮಾಸ: ಮಾರ್ಗಶಿರ ಮಾಸ
ಪಕ್ಷ: ಶುಕ್ಲ ಪಕ್ಷ
ತಿಥಿ: ತೃತೀಯ / ಚತುರ್ಥಿ
ನಕ್ಷತ್ರ: ಪೂವಾ೯ಷಾಡ ನಕ್ಷತ್ರ
ರಾಹುಕಾಲ: 03:06 ರಿಂದ 04:32
ಗುಳಿಕಕಾಲ: 12:14 ರಿಂದ 01:40
ಯಮಗಂಡಕಾಲ: 09:22 ರಿಂದ 10:48
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….