
ದೊಡ್ಡಬಳ್ಳಾಪುರ: ಗೆಳೆಯನಿಗೆ ಡ್ರಾಪ್ ನೀಡಲೆಂದು ದ್ವಿಚಕ್ರ ವಾಹನದಲ್ಲಿ ತೆರಳಿದ್ದ ಯುವಕ, ಹಿಂತಿರುಗಿ ಬರುವ ವೇಳೆ ಅಪಘಾತಕ್ಕೆ ಒಳಗಾಗಿ ಸ್ಥಳದಲ್ಲೆ ಸಾವನಪ್ಪಿರುವ ಘಟನೆ ತಾಲೂಕಿನ ಮೆಣಸಿ ಕಾಲೋನಿ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಮೃತ ಯುವಕನನ್ನು ಗುಂಡಸಂದ್ರ ಗ್ರಾಮದ ಗೋಪಾಲ್ (26 ವರ್ಷ) ಎಂದು ಗುರುತಿಸಲಾಗಿದ್ದು, ಇಂದು ಬೆಳಗ್ಗೆ ಗೆಳೆಯನಿಗೆ ಡ್ರಾಪ್ ನೀಡಲು ತೆರಳಿದ್ದವರು ಹಿಂತಿರುಗಿ ಬರುವ ವೇಳೆ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….