ದೊಡ್ಡಬಳ್ಳಾಪುರ: ವಿಧಾನಪರಿಷತ್ ಚುನಾವಣೆಯ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿ.ಸಿ.ನಾರಾಯಣಸ್ವಾಮಿ ಪರವಾಗಿ ಬಿಜೆಪಿ ಮುಖಂಡರು ತಾಲೂಕಿನ ಹಲವೆಡೆ ಮತಯಾಚನೆ ನಡೆಸಿದರು.
ತಾಲೂಕಿನ ಹೊನ್ನಾಘಟ್ಟ, ಕೆಸ್ತೂರು, ಮಂಡಿ ಬ್ಯಾಡರಹಳ್ಳಿ, ಹಣಬೆ, ಕೊಗೋನಹಳ್ಳಿ, ನೇರಳೆಘಟ್ಟ, ಶ್ರವಣೂರು, ಹಾಗೂ ಕುಂಟನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಕರಪತ್ರ ನೀಡಿ ಬಿ.ಸಿ.ನಾರಾಯಣಸ್ವಾಮಿ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.
ಈ ವೇಳೆ ಬಿಜೆಪಿ ತಾಲೂಕು ಅಧ್ಯಕ್ಷ ಟಿ.ಎನ್.ನಾಗರಾಜು, ನಗರ ಅಧ್ಯಕ್ಷ ಎಚ್.ಎಸ್.ಶಿವಶಂಕರ್, ಮಂಡಿ ಬ್ಯಾಡರಲ್ಲಿ ಅಶ್ವಥ್ ನಾರಾಯಣ ಗೌಡ, ರಾಜ್ಯ ಸಾಮಾಜಿಕ ಜಾಲತಾಣ ಶಿವಾನಂದ ರೆಡ್ಡಿ, ತಾಲೂಕು ಕಾರ್ಯದರ್ಶಿ ಕೃಷ್ಣ ನಾಯಕ್, ತಾಲೂಕು ಎಸ್.ಸಿ.ಮೋರ್ಚಾ ಅಧ್ಯಕ್ಷ ದೇವರಾಜ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….