ಎಂಎಸ್‌ಜಿಪಿ ತ್ಯಾಜ್ಯ ವಿರುದ್ಧ ಹೋರಾಟಕ್ಕಿಳಿಯುವಂತೆ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಕೆ

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಎಂಎಸ್‌ಜಿಪಿ ತ್ಯಾಜ್ಯ ಘಟಕದ ವಿರುದ್ಧದ ರೈತ ಹೋರಾಟದ ವಿಚಾರದಲ್ಲಿ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ನಡೆದುಕೊಂಡ ದೌರ್ಜನ್ಯದ ನಡೆಯ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಅಹವಾಲು ನೀಡಿ, ಅಧಿವೇಶನದಲ್ಲಿ ಈ ಕುರಿತು ಸಮಗ್ರವಾಗಿ ಚರ್ಚಿಸಬೇಕೆಂದು ಮುಖಂಡರು ಮನವಿ ಮಾಡಿದ್ದಾರೆ.

ಬಿಡದಿಯ ಕೇತಗಾನಹಳ್ಳಿಯ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಮನವಿ ಪತ್ರ ಸಲ್ಲಿಸಿದರು. 

ಈ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ತ್ಯಾಜ್ಯ ಘಟಕ ವಿರುದ್ಧದ ಹೋರಾಟದಲ್ಲಿ ತೊಡಗಿದ್ದ ರೈತ ಮುಖಂಡರ ಮೇಲಿನ ದೌರ್ಜನ್ಯ ಖಂಡನೀಯ. ರೈತರನ್ನು ಕೆಣಕಿ ಉಳಿದ ಸರ್ಕಾರ ಇತಿಹಾಸದಲ್ಲಿಯೇ ಇಲ್ಲ. ನಾನೇ ಖುದ್ದು ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರಿಗೆ ನ್ಯಾಯ ಕೊಡಿಸುತ್ತೇನೆ. ರೈತರ ಹೋರಾಟವನ್ನು ಹೈಜಾಕ್ ಮಾಡಿರುವ ಸ್ಥಳೀಯ ಶಾಸಕರ ನಡೆ ಸಮಂಜಸವಲ್ಲ. ರೈತರ ಹೋರಾಟ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ ಎಂದು ಹೇಳಿದರೆನ್ನಲಾಗಿದೆ.

ಮನವಿ ನೀಡಿ ಮಾತನಾಡಿದ ನವ ಬೆಂಗಳೂರು ಹೋರಾಟ ಸಮಿತಿ ಗೌರವಾಧ್ಯಕ್ಷ ಕೆ.ವಿ.ಸತ್ಯಪ್ರಕಾಶ್, ಶಾಂತಿಯುತವಾಗಿ ಯಶಸ್ಸಿನ ಕಡೆಗೆ ನಡೆಯುತ್ತಿದ್ದ ರೈತರ ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಯಾರು ಯಾರು ಏನೇನು ಹಕೀಕತ್ತು ನಡೆಸಿದ್ದಾರೆಂಬುದು ತಿಳಿದಿದೆ. ರೈತನಿಗೆ ದ್ರೋಹ ಎಸಗಿದ ಎಲ್ಲರೂ ಶೀಘ್ರದಲ್ಲೇ ಅದರ ಫಲವನ್ನು ಅನುಭವಿಸಲಿದ್ದಾರೆ. ಎಂಎಸ್‌ಜಿಪಿ ಘಟಕ ಮುಚ್ಚುವುದು ಖಚಿತ. ಕುಮಾರಸ್ವಾಮಿಯವರ ಭಾಗವಹಿಸುವಿಕೆಯಿಂದ ನಮ್ಮ ಹೋರಾಟಕ್ಕೆ ನೂರಾನೆ ಬಲ ಸಿಕ್ಕಂತಾಗಿದೆ. ಈ ಹೋರಾಟದಲ್ಲಿ ಅನ್ನದಾತನಿಗೆ ಖಂಡಿತವಾಗಿಯೂ ನ್ಯಾಯ ಸಿಗುತ್ತದೆ ಎಂದರು.

ಈ ವೇಳೆ ಭಕ್ತರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಆರ್.ಸಿದ್ಧಲಿಂಗಯ್ಯ , ನವ ಬೆಂಗಳೂರು ಹೋರಾಟ ಸಮಿತಿ ಮುಖಂಡ ಜಗದೀಶ್ ಚೌಧರಿ ಮತ್ತಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ ಬರೋಬ್ಬರಿ 18 ಲಕ್ಷ ರೂ.ಹಣ ಕಳೆದುಕೊಂಡ ಯುವಕನೋರ್ವ ಸೆಲ್ಪಿ ವೀಡಿಯೊ ಮಾಡಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ..

[ccc_my_favorite_select_button post_id="110524"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!