
ದೊಡ್ಡಬಳ್ಳಾಪುರ: ದ್ರಾಕ್ಷಿ ಸಾಗಿಸುವ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿರುವ ಘಟನೆ ಕಾಡನೂರು ಕೈಮರ ಸಮೀಪ ಸಂಭವಿಸಿದೆ.
ಮಂಗಳವಾರ ಬೆಳಗ್ಗಿನ ಜಾವ ನೆಲಮಂಗಲ ಕಡೆಯಿಂದ ದೊಡ್ಡಬಳ್ಳಾಪುರ ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ವಾಹನದಲ್ಲಿ ಮೂರು ಮಂದಿ ಇದ್ದರೆನ್ನಲಾಗುತ್ತಿದ್ದು, ಸಣ್ಣಪುಟ್ಟ ಗಾಯಗಳಾಗಿ, ಚಿಕಿತ್ಸೆಗೆ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….