ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್‌ಗೆ ದೈವಾರ್ಷಿಕ ಚುನಾವಣೆ-2021ರ ಪ್ರಯುಕ್ತ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2021ರ ಡಿಸೆಂಬರ್ 8 ರಿಂದ 11 ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಅಭ್ಯರ್ಥಿಗಳು/ ರಾಜಕೀಯ ಪ್ರತಿನಿಧಿಗಳು/ ಬೆಂಬಲಿಗರ ಆರೋಗ್ಯದ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮತಗಟ್ಟೆಗಳ ಪ್ರದೇಶ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಸಿ.ಆರ್.ಪಿ.ಸಿ. 1973ರ ಕಲಂ 144ರ ಮೇರೆಗೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಆದೇಶಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್‌ಗೆ ದೈವಾರ್ಷಿಕ ಚುನಾವಣೆ-2021ರ ಪ್ರಯುಕ್ತ ಈ ಆದೇಶವು ಮನೆ ಮನೆ ಪ್ರಚಾರಕ್ಕೆ ಅನ್ವಯಿಸುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….