ಸೇನಾ ಹೆಲಿಕಾಪ್ಟರ್ ಪತನ: ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಸೇರಿ 13 ಮಂದಿ ಸಾವು..

ಚೆನ್ನೈ: ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು, ಘಟನೆಯಲ್ಲಿ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಅವರು ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ.

ಹೆಲಿಕಾಪ್ಟರ್ ದುರಂತದಲ್ಲಿ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಹಾಗೂ ಇತರ 11 ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಿಪಿನ್ ರಾವತ್ ಅವರನ್ನು ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸೇನಾ ಹೆಲಿಕಾಪ್ಟರ್ ನಲ್ಲಿ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರ್ಸೇವಕ್ ಸಿಂಗ್, ನಾಯಕ್ ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯಿ ತೇಜಾ ಮತ್ತು ಹವಾಲ್ದಾರ್ ಸತ್ಪಾಲ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ 12 ಜನರನ್ನು(ಸೇನಾಧಿಕಾರಿಗಳೂ ಒಳಗೊಂಡಂತೆ) ಹೊತ್ತು ತೆರಳುತ್ತಿತ್ತು.

ತಮಿಳು ನಾಡಿನ ಕೂನೂರು ಬಳಿ ಎಂಐ-17ವಿ5 ಹೆಲಿಕಾಪ್ಟರ್( Mi-17V5 helicopter) ಪತನಕ್ಕೀಡಾಗಿರುವ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಭಾರತೀಯ ವಾಯುಪಡೆ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್, ಅವರ ಕುಟುಂಬ ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಶೃಂಗೇರಿ ಷಡ್ಯಂತ್ರ ದೇಶ, ಪ್ರಜಾಪ್ರಭುತ್ವಕ್ಕೆ ಕಳಂಕ: ಡಿಸಿಎಂ ಡಿ.ಕೆ. ಶಿವಕುಮಾರ್

ಶೃಂಗೇರಿ ಷಡ್ಯಂತ್ರ ದೇಶ, ಪ್ರಜಾಪ್ರಭುತ್ವಕ್ಕೆ ಕಳಂಕ: ಡಿಸಿಎಂ ಡಿ.ಕೆ. ಶಿವಕುಮಾರ್

ಶೃಂಗೇರಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಷಡ್ಯಂತ್ರ ಹಾಗೂ ವ್ಯವಸ್ಥಿತ ಅಪರಾಧ ನಡೆದಿದೆ. ಇದು ದೇಶ, ಪ್ರಜಾಪ್ರಭುತ್ವಕ್ಕೆ ಕಳಂಕ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.Shivakumar) ಅವರು ಕಿಡಿಕಾರಿದರು.

[ccc_my_favorite_select_button post_id="121675"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]