ದೊಡ್ಡಬಳ್ಳಾಪುರ: ವೆಂಕಟಾಚಲಯ್ಯ ರಾಜೀನಾಮೆಯಿಂದ ತೆರವಾಗಿದ್ದ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮಪಂಚಾಯಿತಿಗೆ ವಿ.ವೆಂಕಟೇಶಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
24 ಸದಸ್ಯತ್ವ ಬಲದ ಜಿ.ಹೊಸಹಳ್ಳಿ ಆಡಳಿತ ಮಂಡಳಿಗೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸುಶೀಲಮ್ಮ ಚುನಾವಣೆ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಅಧ್ಯಕ್ಷ ಸ್ಥಾನಕ್ಕೆ ವಿ.ವೆಂಕಟೇಶಯ್ಯ ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾದರು. ಈ ವೇಳೆ 14 ಮಂದಿ ಸದಸ್ಯರು ಹಾಜರಿದ್ದು, 10 ಮಂದಿ ಗೈರು ಹಾಜರಾದರು.
ನೂತನವಾಗಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ವಿ.ವೆಂಕಟೇಶಯ್ಯ ಅವರನ್ನು ಎಪಿಎಂಸಿ ಅಧ್ಯಕ್ಷ ಎನ್.ವಿಶ್ವನಾಥ್, ಗ್ರಾಪಂ ಮಾಜಿ ಅಧ್ಯಕ್ಷ ಅಣ್ಣಯ್ಯಪ್ಪ, ನಿವೃತ್ತ ಶಿಕ್ಷಕ ಜಯಶಂಕರ್ ರೆಡ್ಡಿ, ವಿಎಸ್ ಎಸ್ ಎನ್ ಅಧ್ಯಕ್ಷ ಬೈಯಣ್ಣ ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….