ದೊಡ್ಡಬಳ್ಳಾಪುರ: ಎಂಎಸ್ಜಿಪಿ ತ್ಯಾಜ್ಯ ಘಟಕದ ವಿರುದ್ಧದ ಹೋರಾಟದ ಕುರಿತಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೊಂದಿಗೆ ನವ ಬೆಂಗಳೂರು ಹೋರಾಟ ಸಮಿತಿ ಗೌರವಾಧ್ಯಕ್ಷ ಕೆ.ವಿ.ಸತ್ಯಪ್ರಕಾಶ್ ಚರ್ಚಿಸಿದ್ದಾರೆ.
ಬೆಂಗಳೂರಿನ ಗೃಹ ಕಚೇರಿಯಲ್ಲಿ ದೇವೇಗೌಡರನ್ನು ಭೇಟಿಯಾದ ಸತ್ಯಪ್ರಕಾಶ್, ಬಿಬಿಎಂಪಿ ತ್ಯಾಜ್ಯದಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ವಿವರಿಸಿದ್ದಾರೆ.
ಈ ವೇಳೆ ರೈತರ ಈ ಹೋರಾಟಕ್ಕೆ ದೇವೇಗೌಡರು ಸಂಪೂರ್ಣ ಬೆಂಬಲ ನೀಡಿರುವುದಲ್ಲದೆ, ಈ ಕುರಿತ ಸಂಪೂರ್ಣ ಬೆಳವಣಿಗೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆಂದು ನವ ಬೆಂಗಳೂರು ಹೋರಾಟ ಸಮಿತಿ ಅಧ್ಯಕ್ಷ ಜಿ.ಎನ್.ಪ್ರದೀಪ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….