ಬೆಂ.ಗ್ರಾ.ಜಿಲ್ಲೆ: ಕೃಷಿ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ರೈತರಿಗಾಗಿ ವಿವಿಧ ಯೋಜನೆಗಳು ಅನುಷ್ಠಾನಗೊಳ್ಳತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಜಿಲ್ಲಾ ಅಥವಾ ತಾಲ್ಲೂಕು ಮಟ್ಟದಲ್ಲಿರುವ ಕೃಷಿ ಇಲಾಖಾ ಅಧಿಕಾರಿಗಳನ್ನು ಭೇಟಿ ಮಾಡಿ, ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.
ಕೃಷಿ ಯಾಂತ್ರೀಕರಣ ಯೋಜನೆ, ಕೃಷಿ ಯಂತ್ರದಾರೆ ಯೋಜನೆ, ಸಮಗ್ರ ಕೃಷಿ ಅಭಿಯಾನ, ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರಧನ ಮತ್ತು ಹಾವು ಕಡಿತಕ್ಕೆ ಪರಿಹಾರ, ಕೃಷಿ ಪ್ರಶಸ್ತಿ ಹಾಗೂ ಪಂಡಿತ ಪ್ರಶಸ್ತಿ, ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (ಹೊಸ ಬೆಳೆ ವಿಮಾ ಯೋಜನೆ), ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ (ದ್ವಿದಳಧಾನ್ಯ, ನ್ಯೂಟ್ರಿ ಸಿರಿಧಾನ್ಯಗಳು, ಎಣ್ಣೆಕಾಳು), ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಜಿಲ್ಲಾ ಕೃಷಿ ತರಬೇತಿ ಕೇಂದ್ರಗಳು, ಕೇಂದ್ರ ಪುರಸ್ಕ್ರತ ಆತ್ಮ ಯೋಜನೆ ಈ ಎಲ್ಲಾ ಯೋಜನೆಗಳನ್ನು ಅಲ್ಪಸಂಖ್ಯಾತರ ಸಮುದಾಯದ ರೈತರಿಗಾಗಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಥವಾ ತಾಲ್ಲೂಕು ಮಟ್ಟದಲ್ಲಿರುವ ಕೃಷಿ ಇಲಾಖಾ ಅಧಿಕಾರಿಗಳನ್ನು ಭೇಟಿ ಮಾಡಿ, ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧಿಕಾರಿ ಎಂ.ಮೈಲೇರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಂಗ್ರಹ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….