ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ಇಂದು ದ್ವೈವಾರ್ಷಿಕ ಚುನಾವಣೆಗೆ ತಾಲೂಕಿನಲ್ಲಿ ಸಕಲ ಸಿದ್ದತೆಗಳೊಂದಿಗೆ ಮತದಾನ ಆರಂಭವಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ 28 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಆಯಾ ಗ್ರಾಮ ಪಂಚಾಯಿತಿಗಳು ಹಾಗು ಸ್ಥಳೀಯ ಸಂಸ್ಥೆಗಳ ಕಾರ್ಯಾಲಯಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.
ತಾಲೂಕಿನಲ್ಲಿ 250 ಪುರುಷ ಮತದಾರರು, 265 ಮಹಿಳಾ ಮತದಾರರು ಸೇರಿದಂತೆ ಒಟ್ಟು 515 ಮತದಾರರಿದ್ದಾರೆ. ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕಾರ್ಯವು ತಾಲೂಕು ಆಡಳಿತ ಸೌಧದಲ್ಲಿ ನಡೆಯಲಿದ್ದು, ಚುನಾವಣೆಗೆ ನೇಮಕವಾಗಿರುವ ಸಿಬ್ಬಂದಿ ಅಗತ್ಯ ಪರಿಕರಗಳೊಂದಿಗೆ ಮತಗಟ್ಟೆಗಳಲ್ಲಿ ಸಿದ್ದವಾಗಿದ್ದಾರೆ.
ಮತಗಟ್ಟೆಗಳಲ್ಲಿ ಮತದಾನದ ದಿನದಂದು ಕಾರ್ಯನಿರ್ವಹಿಸಲು 64 ಮತಗಟ್ಟೆ ಅಧಿಕಾರಿಗಳು, 32 ಎಂ.ಓ, 28 ವಿಡಿಯೋ ಗ್ರಾಫರ್‍ಗಳನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ.
28 ಮತಗಟ್ಟೆಗಳ ಪೈಕಿ 9 ಸಾಮಾನ್ಯ, 12 ಸೂಕ್ಷ್ಮ, 7 ಅತಿಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್‍ಗಾಗಿ 3 ಬಸ್ ಮಾರ್ಗ ಹಾಗೂ 2 ಜೀಪ್ ಮಾರ್ಗಗಳನ್ನಾಗಿ ಮಾಡಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….