ವಿಧಾನಪರಿಷತ್ ಚುನಾವಣೆ ಶಾಂತಿಯುತ: ಬೆಂ.ಗ್ರಾ.ಕ್ಷೇತ್ರದಲ್ಲಿ ಶೇ.99.91 / ದೊಡ್ಡಬಳ್ಳಾಪುರದಲ್ಲಿ ಶೇ.100ರಷ್ಟು ಮತದಾನ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು,  ಶೇ.99.91ರಷ್ಟು ಮತದಾನ ನಡೆದಿದೆ. 

ಒಟ್ಟು 3923 ಮತದಾರರಲ್ಲಿ 1868 ಪುರುಷ ಮತ್ತು 2055 ಮಹಿಳಾ ಮತದಾರರ ಪೈಕಿ, 1865 ಪುರುಷ ಮತ್ತು 2044 ಮಹಿಳಾ ಮತದಾರರು ಸೇರಿದಂತೆ ಒಟ್ಟು 3918 ಮಂದಿ ಮತಚಲಾಯಿಸಿದ್ದಾರೆ.

ಹೊಸಕೋಟೆ ತಾಲ್ಲೂಕಿನಲ್ಲಿ 582 ಮತದಾರರ ಪೈಕಿ 579 ಮತದಾರರು, ದೇವನಹಳ್ಳಿ ತಾಲ್ಲೂಕಿನಲ್ಲಿ 396 ಮತದಾರರ ಪೈಕಿ 396, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 515 ಮತದಾರರ ಪೈಕಿ 515, ನೆಲಮಂಗಲ ತಾಲ್ಲೂಕಿನಲ್ಲಿ 371ಮತದಾರರ ಪೈಕಿ 371, ಮಾಗಡಿ ತಾಲ್ಲೂಕಿನಲ್ಲಿ 479 ಮತದಾರರ ಪೈಕಿ 479, ರಾಮನಗರ ತಾಲ್ಲೂಕಿನಲ್ಲಿ 390 ಮತದಾರರ ಪೈಕಿ 390, ಕನಕಪುರ ತಾಲ್ಲೂಕಿನಲ್ಲಿ

677 ಮತದಾರರ ಪೈಕಿ 675 ಹಾಗೂ ಚನ್ನಪಟ್ಟಣ ತಾಲ್ಲೂಕಿನಲ್ಲಿ 513 ಮತದಾರರ ಪೈಕಿ 513 ಮತದಾರರು ಮತಚಲಾಯಿಸಿದ್ದಾರೆ.

ಹೊಸಕೋಟೆ ತಾಲ್ಲೂಕಿನಲ್ಲಿ 99.48%, ದೇವನಹಳ್ಳಿ ತಾಲ್ಲೂಕಿನಲ್ಲಿ 100%, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಶೇ.100%, ನೆಲಮಂಗಲ ತಾಲ್ಲೂಕಿನಲ್ಲಿ ಶೇ.100%, ಮಾಗಡಿ ತಾಲ್ಲೂಕಿನಲ್ಲಿ ಶೇ.100%, ರಾಮನಗರ ತಾಲ್ಲೂಕಿನಲ್ಲಿ ಶೇ. 100%, ಕನಕಪುರ ತಾಲ್ಲೂಕಿನಲ್ಲಿ ಶೇ.99.85% ಹಾಗೂ ಚನ್ನಪಟ್ಟಣ ತಾಲ್ಲೂಕಿನಲ್ಲಿ ಶೇ.100% ರಷ್ಟು  ಮತದಾನ ನಡೆದಿದೆ.

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ಶುಕ್ರವಾರ ನಡೆದ ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಒಟ್ಟಾರೆ ಶೇ.100 ಮತದಾನವಾಗಿದೆ.

ತಾಲೂಕಿನಲ್ಲಿ 250 ಪುರುಷ ಮತದಾರರು, 265 ಮಹಿಳಾ ಮತದಾರರು ಸೇರಿದಂತೆ ಒಟ್ಟು 515 ಮತದಾರರಿದ್ದು, ಎಲ್ಲರೂ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭವಾದರೂ 10 ಗಂಟೆಯ ವೇಳೆಗೆ ಶೇ.2ರಷ್ಟು ಮಾತ್ರ ಮತದಾನವಾಗಿತ್ತು. ಮಧ್ಯಾಹ್ನ 2 ಗಂಟೆ ವೇಳೆಗೆ ಶೇ.72 ಮತದಾನವಾಗಿತ್ತು. ಮತಕೇಂದ್ರಗಳಲ್ಲಿ ಆಶಾ ಕಾರ್ಯಕರ್ತೆಯರು ಮತದಾರರ ಕೈಗೆ ಸ್ಯಾನಿಟೈಸರ್  ಹಾಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿ ಒಳ ಬಿಡುತ್ತಿದ್ದರು.

ಶಾಸಕ ಟಿ.ವೆಂಕಟರಮಣಯ್ಯ ನಗರಸಭೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಈ ವೇಳೆ ಕಾಂಗ್ರೆಸ್‍, ಬಿಜೆಪಿ, ಜೆಡಿಎಸ್ ನಗರಸಭಾ ಸದಸ್ಯರು ಸಹ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಮತ ಕೇಂದ್ರಗಳ ಮುಂದೆ ಮತದಾರ ಜನಪ್ರತಿನಿಧಿಗಳೊಂದಿಗೆ ಪಕ್ಷದ ಮುಖಂಡರು ಗ್ರೂಪ್ ಪೊಟೋ ತೆಗೆಸಿಕೊಳ್ಳುತ್ತಿದ್ದ ದೃಶ್ಯಕಂಡು ಬಂದಿತು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ 28 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು.  ಆಯಾ ಗ್ರಾಮ ಪಂಚಾಯಿತಿಗಳು ಹಾಗು ಸ್ಥಳೀಯ ಸಂಸ್ಥೆಗಳ ಕಾರ್ಯಾಲಯಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಡಿ-ಮಸ್ಟರಿಂಗ್ ಕಾರ್ಯವು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು. ತಹಸೀಲ್ದಾರ್ ಟಿ.ಎಸ್.ಶಿವರಾಜ್ ಹಾಗೂ ಚುನಾವಣಾ ಸಿಬ್ಬಂದಿ ಹಾಜರಿದ್ದರು.

ಮತಗಟ್ಟೆಗಳಲ್ಲಿ ಮತದಾನದ ದಿನದಂದು ಕಾರ್ಯನಿರ್ವಹಿಸಲು 64 ಮತಗಟ್ಟೆ ಅಕಾರಿಗಳು,  32 ಎಂ.ಓ, 28 ವಿಡಿಯೋ ಗ್ರಾಫರ್‍ಗಳನ್ನು ನಿಯೋಜಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

28 ಮತಗಟ್ಟೆಗಳ ಪೈಕಿ 9 ಸಾಮಾನ್ಯ, 12 ಸೂಕ್ಷ್ಮ, 7 ಅತಿಸೂಕ್ಷ್ಮ  ಮತಗಟ್ಟೆಗಳೆಂದು ಗುರುತಿಸಲಾಗಿತ್ತು.

ಡಿ.14ರಂದು ದೇವನಹಳ್ಳಿಯ ಆಕಾಶ್ ಇಂಟರ್‍ನ್ಯಾಷನಲ್ ಶಾಲೆಯಲ್ಲಿ ಕ್ಷೇತ್ರದ 8 ತಾಲೂಕುಗಳ ಮತ ಎಣಿಕೆ ಕಾರ್ಯ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ 2 ದಿನಗಳ‌ ವಿಶೇಷ ಅಧಿವೇಶನ: ಡಿಸಿಎಂ ಡಿ.ಕೆ. ಶಿವಕುಮಾರ್

ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ 2 ದಿನಗಳ‌ ವಿಶೇಷ ಅಧಿವೇಶನ:

"ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ರಾಜ್ಯಗಳಿಗೆ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ಮಾಡಲು 2 ದಿನಗಳ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ" ಎಂದು ಡಿಸಿಎಂ ಡಿ.ಕೆ.

[ccc_my_favorite_select_button post_id="118275"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!