ದೊಡ್ಡಬಳ್ಳಾಪುರ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಅಂತರ ವಿಶ್ವವಿದ್ಯಾನಿಲಯ ಪಂದ್ಯಾವಳಿಗಳಲ್ಲಿ ಪಾಲ್ಗೊಳ್ಳುವ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಮಹಿಳೆಯರ ಕಬಡ್ಡಿ ತಂಡದ ಆಯ್ಕೆ ಪ್ರಕ್ರಿಯೆ ನಡೆಯಿತು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಜಿ.ಶ್ರೀನಿವಾಸ್ ಈ ಕುರಿತು ಮಾಹಿತಿ ನೀಡಿ, ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ 15 ಮಂದಿ ಮಹಿಳೆಯರ ಕಬಡ್ಡಿ ತಂಡವನ್ನು ಆಯ್ಕೆ ಮಾಡಲಾಗಿದ್ದು, ವಿವಿಯ 29 ಕಾಲೇಜುಗಳ 85 ಕ್ರೀಡಾಪಟುಗಳು ಭಾಗವಹಿಸಿದ್ದರು.
ಆಯ್ಕೆಯಾದವರು ಡಿ.26ರಂದು ತಮಿಳುನಾಡಿನ ಕಾರೈಕುಡಿಯ ಅಲಗಪ್ಪ ವಿವಿಯಲ್ಲಿ ನಡೆಯಲಿರುವ ದಕ್ಷಿಣ ಭಾರತ ವಲಯದ ಅಂತರ ವಿಶ್ವವಿದ್ಯಾನಿಲಯದ ಕಬಡ್ಡಿ ಪಂದ್ಯಾವಳಿಗಳಲ್ಲಿ ಭಾಗವಹಿಸಲಿದ್ದಾರೆ.
ಈ ಕ್ರೀಡಾಕೂಟದಲ್ಲಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿ, ರಾಜ್ಯಗಳು ಸುಮಾರು 85 ವಿಶ್ವವಿದ್ಯಾನಿಲಯಗಳ ಕಬಡ್ಡಿ ತಂಡಗಳು ಭಾಗವಹಿಸಲಿವೆ ಎಂದು ತಿಳಿಸಿದರು.
ಆಯ್ಕೆಯಾದ ಕ್ರೀಡಾಪಟುಗಳಿಗೆ ಕಾಲೇಜಿನ ಶ್ರೀನಿವಾಸಯ್ಯ, ಪ್ರಾಧ್ಯಾಪಕ ಸದಾಶಿವ ರಾಮಚಂದ್ರಗೌಡ ಹಾಗೂ ವಿವಿ ಕಬಡ್ಡಿ ತಂಡದ ಆಯ್ಕೆ ಸದಸ್ಯರು ಭಾಗವಹಿಸಿದ್ದರು. ಪ್ರಾಂಶುಪಾಲ ಪ್ರೋ.ಎನ್.ಶ್ರೀನಿವಾಸಯ್ಯ, ಪ್ರಾಧ್ಯಾಪಕ ಸದಾಶಿವ ರಾಮಚಂದ್ರಗೌಡ, ದೈಹಿಕ ಶಿಕ್ಷಣ ನಿರ್ದೇಶಕ ಜಿ.ಶ್ರೀನಿವಾಸ್, ಪ್ರಾಧ್ಯಾಪಕರು ಹಾಗೂ ವಿವಿ ಕಬಡ್ಡಿ ತಂಡದ ಆಯ್ಕೆ ಸದಸ್ಯರು ಶುಭ ಕೋರಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….