ಚಿಕ್ಕಬಳ್ಳಾಪುರ: ಕಳೆದ ಅಕ್ಟೋಬರ್ ಮತ್ತು ನವೆಂಬರ್ ಮಾಹೆಯಲ್ಲಿ ಜಿಲ್ಲೆಯಾದ್ಯಂತ ಸುರಿದ ಭಾರೀ ಪ್ರಮಾಣದ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಾನಿಗೊಳಗಾದ ರೈತರ ಬೆಳೆಗಳ ವಿವರವನ್ನು ಈವರೆಗೆ ಒಟ್ಟು 10 ಹಂತಗಳಲ್ಲಿ ನಮೂದಿಸಲಾಗಿದ್ದು, ಒಟ್ಟು 46,378 ರೈತ ಫಲಾನುಭವಿಗಳಿಗೆ 22,25,51,036 ರೂಪಾಯಿಗಳನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.
ಈ ಕುರಿತು ಗುರುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿರುವ ಅವರು, ಮಳೆಯಿಂದ ಜಿಲ್ಲೆಯಾದ್ಯಂತ ಆಗಿರುವ ಬೆಳೆ ಹಾನಿ ವಿವರಗಳನ್ನು ಪ್ರಥಮ ಆದ್ಯತೆಯ ಮೇಲೆ ಪರಿಹಾರ್ ಪೋರ್ಟಲ್ ನಲ್ಲಿ ನಮೂದಿಸಲಾಗಿದೆ. ಡಿ.4 ರ ವರೆಗೆ ನಡೆದ 4 ಹಂತಗಳ ದತ್ತಾಂಶ ನಮೂದು ಭಾಗವಾಗಿ 16,917 ರೈತ ಫಲಾನುಭವಿಗಳಿಗೆ ಒಟ್ಟು 8,07,92,442.5 ರೂಪಾಯಿಯನ್ನು ನೇರ ನಗದು ವರ್ಗಾವಣೆ ( ಡಿಬಿಟಿ)ಮೂಲಕ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿತ್ತು.
ಪರಿಹಾರ್ ಪೋರ್ಟಲ್ ನಲ್ಲಿ ನಮೂದಿಸುವ ಮತ್ತೆ ಮುಂದುವರೆದು ಡಿ.9 ರ ಗುರುವಾರದವರೆಗೆ ಲಭ್ಯವಾಗಿರುವ ಅಂಕಿ ಅಂಶಗಳ ಪ್ರಕಾರ, ಈವರೆಗೆ ಒಟ್ಟು 10 ಹಂತಗಳಲ್ಲಿ ರೈತರ ನೊಂದಣಿ ಮಾಡಿ ರೈತ ಫಲಾನುಭವಿಗಳ ಹೆಸರನ್ನು ಪರಿಹಾರ್ ಪೋರ್ಟಲ್ ದತ್ತಾಂಶದಲ್ಲಿ ನಮೂದಿಸಲಾಗಿದೆ. ಈವರೆಗೆ ಒಟ್ಟು 46,378 ರೈತ ಫಲಾನುಭವಿಗಳಿಗೆ 22,25,51,036 ರೂಪಾಯಿಗಳನ್ನು ಡಿಬಿಟಿ ಮೂಲಕ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….