ಮಂಗಳೂರು: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೆಲಿಕಾಪ್ಟರ್ ದುರ್ಘಟನೆಯಲ್ಲಿ ಮೃತಪಟ್ಟಿದ್ದಕ್ಕೆ ಸಂಭ್ರಮಾಚರಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ ಬೆನ್ನಲ್ಲೇ ಪ್ರಕರಣ ದಾಖಲಾಗಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ಸದ್ಯ 3 ಫೇಸ್ಬುಕ್ ಪೋಸ್ಟ್ ಗಳ ಮೇಲೆ ಪ್ರಕರಣ ದಾಖಲಾಗಿದೆ. ಇವರಲ್ಲಿ ಒಬ್ಬರು ಕಾರ್ಕಳ ಮೂಲದವರು, ಇನ್ನೊಬ್ಬ ಬೆಂಗಳೂರು, ಮತ್ತೊಂದು ಪೋಸ್ಟ್ ಮಾಡಿದ್ದವರ ಮಾಹಿತಿ ಸಿಕ್ಕಿಲ್ಲ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಫೇಸ್ ಬುಕ್ ನಲ್ಲಿ ಬಿಪಿನ್ ರಾವತ್ ಸಾವಿನ ಬಗ್ಗೆ ಪ್ರಚೋದನಕಾರಿಯಾಗಿ ಬರೆದಿದ್ದಾರೆ ಎಂದು ತಿಳಿಸಿದ ಪೊಲೀಸ್ ಕಮಿಷನರ್ ಶಶಿಕುಮಾರ್, ದೂರು ಬಂದ ಹಿನ್ನೆಲೆ ಕೇಸು ದಾಖಲಿಸಿದ್ದೇವೆ. ಮೂವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ. ವಿಚಾರಣೆ ಬಳಿಕ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವ ಕುರಿತು ತಿಳಿಸಿದ್ದಾರೆಂದು ಕೋಸ್ಟಲ್ ಮಿರರ್ ವರದಿ ತಿಳಿಸಿದೆ.
ಆರಗ ಜ್ಞಾನೇಂದ್ರ ಸೂಚನೆ: ಸಿಡಿಎಸ್ ಬಿಪಿನ್ ರಾವತ್ ನಿಧನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಕೃತ ಪೋಸ್ಟ್ ಮಾಡಿದ್ದಾರೆ. ಈ ಹಿನ್ನೆಲೆ ದೇಶ ವಿರೋಧಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳಬೇಕೆಂದು ಡಿಜಿ ಮತ್ತು ಐಜಿಪಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ವಿಕೃತ ಪೋಸ್ಟ್ ಮಾಡುವವರನ್ನು ಸಹಿಸುವುದಿಲ್ಲ. ದುಷ್ಕರ್ಮಿಗಳ ವಿಳಾಸ ಪತ್ತೆ ಹಚ್ಚಿ ತಕ್ಕ ಶಿಕ್ಷೆ ಆಗಬೇಕು ಅಂತ ದೂರವಾಣಿ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಡಿಜಿಪಿಗೆ ಸೂಚನೆ ನೀಡಿದ್ದಾರೆ.
ತಮಿಳುನಾಡಿನ ಕುನೂರ್ ಬಳಿ ಬುಧವಾರ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿಜನರಲ್ ಬಿಪಿನ್ ರಾವತ್, ಪತ್ನಿ ಮತ್ತು ಇತರ 11 ಮಂದಿ ಸಾವನ್ನಪ್ಪಿದ್ದನ್ನು ವಿಚಾರವನ್ನು ಕೆಲವರು ಅಪಹಾಸ್ಯ ಮಾಡಿ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಆಕ್ರೋಶ ಉಂಟಾಗಿತ್ತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….