ದೊಡ್ಡಬಳ್ಳಾಪುರ: ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಮಂಡಳಿಗೆ ಡಿಸೆಂಬರ್ 12 ರಂದು ಚುನಾವಣೆ ನಡೆಯುತ್ತಿದ್ದು, ಮತದಾನ ಆರಂಭಗೊಂಡಿದೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ 11006 ಮಂದಿ ಮತದಾರರಿದ್ದು, ಮತಚಲಾವಣೆಗೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 22 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಒಂದು ಮತಗಟ್ಟೆಯಲ್ಲಿ 500 ಮಂದಿ ಮತದಾನಕ್ಕೆ ನಿಗದಿ ಪಡಿಸಿದ್ದು, 22 ಮತಗಟ್ಟೆಗಳಲ್ಲಿ 11006 ಮಂದಿ ಮತಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.
35 ನಿರ್ದೇಶಕ ಸ್ಥಾನಗಳಿಗೆ ನಡೆಯುತ್ತಿರುವ ಈ ಚುನಾವಣೆಯಲ್ಲಿ 221ಕ್ಕೂ ಹೆಚ್ಚಿನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಒಕ್ಕಲಿಗ ಸಮುದಾಯದ ಘಟಾನುಘಟಿ ಮುಖಂಡರು ನಾನಾ ಬಣಗಳ ಮೂಲಕ ಅಖಾಡಕ್ಕೆ ಇಳಿದಿದ್ದಾರೆ. ವಿಧಾನಸಭೆ, ಲೋಕಸಭೆ ಚುನಾವಣೆ ಮೀರಿಸುವಂಥ ಬಿರುಸಿನ ಪ್ರಚಾರ ನಡೆದಿದ್ದು, ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಮೇಲ್ಮನೆ ಬಿಜೆಪಿ ಸದಸ್ಯ ಅ.ದೇವೇಗೌಡ, ನಿವೃತ್ತ ಕುಲಪತಿ ಕೆ.ನಾರಾಯಣಗೌಡ, ವೈದ್ಯರಾದ ಡಾ.ಆಂಜಿನಪ್ಪ, ಮಾಜಿ ನಿರ್ದೇಶಕ ಪ್ರೊ.ಎಂ. ನಾಗರಾಜ್, ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಕೆಂಚಪ್ಪಗೌಡ, ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ.ಉಮೇಶ್, ನ್ಯಾಯವಾದಿ ಎನ್.ಎಂ.ಸೊಣ್ಣೇಗೌಡ ಮೊದಲಾದವರು ತಮ್ಮದೇ ಸಿಂಡಿಕೇಟ್ ಮಾಡಿಕೊಂಡು ಸ್ಪರ್ಧೆಯಲ್ಲಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….