ಬೆಂ.ಗ್ರಾ.ಜಿಲ್ಲೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, 17-ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್‌ಗೆ ದ್ವೈವಾರ್ಷಿಕ ಚುನಾವಣೆಗೆ ಡಿಸೆಂಬರ್ 10 ರಂದು ಮತದಾನ ನಡೆದಿದ್ದು, ಡಿಸೆಂಬರ್ 14ರಂದು ದೇವನಹಳ್ಳಿ ಪಟ್ಟಣದಲ್ಲಿರುವ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ನಡೆಯಲಿರುವ ಮತ ಎಣಿಕೆ ಕಾರ್ಯಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ 17-ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಮತ ಎಣಿಕೆ ಕಾರ್ಯದ ಪ್ರಕ್ರಿಯೆ ಡಿಸೆಂಬರ್ 14ರಂದು ಬೆಳಿಗ್ಗೆ 7:45 ಗಂಟೆಗೆ ಭದ್ರತಾ ಕೊಠಡಿ ತೆರೆಯುವ ಮೂಲಕ ಆರಂಭಗೊಳ್ಳಲಿದ್ದು, ಮತ ಎಣಿಕೆ ಕಾರ್ಯಕ್ಕಾಗಿ 14 ಟೇಬಲ್ ಗಳನ್ನು ನಿಗದಿಪಡಿಸಲಾಗಿದೆ. ಪ್ರತಿ ಟೇಬಲ್‌ಗೆ ಇಬ್ಬರು ಸಿಬ್ಬಂದಿಗಳಂತೆ ಒಟ್ಟು 28 ಸಿಬ್ಬಂದಿಗಳು ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾಗಿದೆ.
ಮತ ಎಣಿಕೆ ಕೇಂದ್ರದಲ್ಲಿ ಚುನಾವಣಾ ವೀಕ್ಷಕರು, ಮಾಧ್ಯಮ ಪ್ರತಿನಿಧಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಸುತ್ತಿನ ಎಣಿಕೆ ಫಲಿತಾಂಶವನ್ನು ತಿಳಿಸಲು ಡಿಜಿಟಲ್ ಡಿಸ್‌ಪ್ಲೇ ಬೋರ್ಡ್ ವ್ಯವಸ್ಥೆ ಮಾಡಲಾಗಿದೆ.
ಮತ ಎಣಿಕೆ ಕೇಂದ್ರದಲ್ಲಿ ಸೂಕ್ತ ಮೂಲಭೂತ ಸೌಕರ್ಯಗಳ ಏರ್ಪಾಟು ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ 17-ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….