ದೊಡ್ಡಬಳ್ಳಾಪುರ: ಚಿತ್ರದುರ್ಗದಲ್ಲಿ ನಡೆದ 40ನೇ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ, ತಾಲೂಕಿನ ಜಿ.ಹೊಸಹಳ್ಳಿ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯ ಶುಶ್ರೂಷ ಅಧಿಕಾರಿ ಜಯಮ್ಮ.ಟಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಡಿ.11 ಮತ್ತು 12 ರಂದು ನಡೆದ 40ನೇ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಜಯಮ್ಮ.ಟಿ., 200 ಮೀಟರ್ ಓಟ, ಉದ್ದ ಜಿಗಿತ ಹಾಗೂ 800 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಹಿನ್ನಲೆಯಲ್ಲಿ ಹರಿತಲೇಖನಿಯೊಂದಿಗೆ ಮಾತನಾಡಿರುವ ಜಯಮ್ಮ ಟಿ., ಈ ಸಾಧನಗೆ ವೈದ್ಯಾಧಿಕಾರಿ ಡಾ.ಶ್ವೇತಾನಾಯ್ಕ್, ಸಿಬ್ಬಂದಿ ಹಾಗೂ ನನ್ನ ಕುಟುಂಬದ ಪ್ರೋತ್ಸಾಹ ಬಹುಮುಖ್ಯ ಕಾರಣವಾಗಿದೆ. ಪಂದ್ಯಾವಳಿಯಲ್ಲಿ ಭಾಗವಹಿಸಲೇಬೇಕೆಂದು ಹೆಚ್ಚು ಒತ್ತಡ ಹೇರಿದ ಡಾ.ಶ್ವೇತಾನಾಯ್ಕ್ ಅವರ ಸಹಕಾರ ಅಪಾರ ಎಂದು ಸ್ಮರಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….