ನೋಟುಗಳ ಮೇಲೆ ನೇತಾಜಿ ಪೋಟೋ ಕೋರಿ ಅರ್ಜಿ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ಬೆಂಗಳೂರು: ಕರೆನ್ಸಿ ನೋಟುಗಳ ಮೇಲೆ ಸುಭಾಷ್ ಚಂದ್ರ ಬೋಸ್​ ಅವರ ಫೋಟೋ ಮುದ್ರಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ 8 ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕಲ್ಕತ್ತಾ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಸ್ವಾತಂತ್ರ್ಯ ಹೋರಾಟಗಾರ ಎಂದು ಹೇಳಿಕೊಂಡಿರುವ 94 ವರ್ಷದ ಹರೀಂದ್ರನಾಥ್ ಬಿಸ್ವಾಸ್ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ್ ಹಾಗೂ ನ್ಯಾಯಮೂರ್ತಿ ರಾಜಶ್ರೀ ಭಾರದ್ವಾಜ್ ಅವರಿದ್ದ ವಿಭಾಗೀಯ ಪೀಠ ಕೇಂದ್ರದ ನಿಲುವು ತಿಳಿಸುವಂತೆ ಸೂಚಿಸಿದೆ.

ಅರ್ಜಿಯಲ್ಲಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿ ಪಾತ್ರ ವಹಿಸಿದ್ದರು. ಆದರೆ, ಭಾರತ ಸರ್ಕಾರ ಅವರಿಗೆ ಅಗತ್ಯ ಮಾನ್ಯತೆಯನ್ನೇ ನೀಡಿಲ್ಲ. ಆದ್ದರಿಂದ, ನೋಟುಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಫೋಟೋ ಮುದ್ರಿಸುವಂತೆಯೇ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಫೋಟೋ ಕೂಡ ಮುದ್ರಿಸುವಂತೆ ಆದೇಶಿಸಬೇಕು ಎಂದು ಕೋರಿದ್ದಾರೆ. ಇಂದು ನಡೆದ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ವೈ.ಜೆ ದಾಸ್ತೂರ್ ಪೀಠಕ್ಕೆ ಮನವಿ ಮಾಡಿ, ಈ ಕುರಿತು ಪರಿಶೀಲಿಸಿ ನಿಲುವು ತಿಳಿಸಲು 8 ವಾರ ಕಾಲಾವಕಾಶ ನೀಡುವಂತೆ ಕೋರಿದರು. ಮನವಿ ಪುರಸ್ಕರಿಸಿರುವ ಹೈಕೋರ್ಟ್, 8 ವಾರಗಳ ಒಳಗೆ ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು 2022ರ ಫೆಬ್ರವರಿ 21 ಕ್ಕೆ ಮುಂದೂಡಿದೆ.

ಯುವ ಜನರ ಪ್ರೇರಣೆಯಾಗಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಫೋಟೋವನ್ನು ನೋಟುಗಳ ಮೇಲೆ ಮುದ್ರಿಸಲು ಕೋರುತ್ತಿರುವುದು ಇದೇ ಮೊದಲಲ್ಲ. 2017ರಲ್ಲಿ ಇಂಥದ್ದೇ ಅರ್ಜಿ ವಿಚಾರಣೆ ನಡೆಸಿದ್ದ ಕಲ್ಕತ್ತಾ ಹೈಕೋರ್ಟ್​ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿತ್ತು. ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಸರ್ಕಾರ, ನೋಟಿನ ಮೇಲೆ ಇತರೆ ರಾಷ್ಟ್ರೀಯ ನಾಯಕರ ಫೋಟೋ ಮುದ್ರಿಸಬಹುದಾದರೂ, ನೋಟಿನ ವಿನ್ಯಾಸ ಮತ್ತು ಫೋಟೋ ಬದಲಾವಣೆಗೆ ರಿಸರ್ವ್ ಬ್ಯಾಂಕ್​ ಆಫ್​ ಇಂಡಿಯಾ ಸಮ್ಮತಿಯೂ ಮುಖ್ಯ ಎಂದಿತ್ತು. ಇನ್ನು, 2021ರ ಫೆಬ್ರವರಿ 4ರಂದು ಮದ್ರಾಸ್ ಹೈಕೋರ್ಟ್​ ಇಂಥದ್ದೇ ಅರ್ಜಿ ಇತ್ಯರ್ಥಪಡಿಸಿ, ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರ ಸ್ವಾತಂತ್ರ್ಯ ಹೋರಾಟವನ್ನು ನ್ಯಾಯಾಲಯ ಪರಿಗಣಿಸುತ್ತದೆ. ಆದರೆ ಅರ್ಜಿದಾರರ ಕೋರಿಕೆ ಪುರಸ್ಕರಿಸಿ ಪೋಟೋ ಮುದ್ರಿಸುವಂತೆ ಆದೇಶಿಸಲಾಗದು ಎಂದಿದೆ ಎಂದು ಲೀಗಲ್ ನ್ಯೂಸ್ ವರದಿ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]