ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಗ್ರಾಮೀಣ ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ

ಬೆಂ.ಗ್ರಾ.ಜಿಲ್ಲೆ: ನವೀನ ಉದ್ಯಮಗಳ ಮೂಲಕ ಗ್ರಾಮೀಣ ಯುವಜನತೆಗೆ ಉದ್ಯೋಗ ಹಾಗೂ ಜೀವನೋಪಾಯ ಭದ್ರತೆ (ARYA) ಯೋಜನೆಯಡಿ ತೆಂಗು ಬೆಳೆಯ ಸುಧಾರಿತ ಬೇಸಾಯ ಪದ್ಧತಿಗಳು ಮತ್ತು ಯಾಂತ್ರೀಕರಣ ಕುರಿತು ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಗ್ರಾಮೀಣ ಯುವಕರಿಗೆ ಡಿ.06 ರಿಂದ 11ರ ವರೆಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ.ಎ.ಪಿ. ಮಲ್ಲಿಕಾರ್ಜುನ ಗೌಡ ರವರು ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಗ್ರಾಮೀಣ ಯುವಕರು ಈ ತರಬೇತಿಯ ನಂತರ ತೆಂಗಿನ ಮರ ಹತ್ತುವುದನ್ನು ಒಂದು ಉದ್ಯೋಗವನ್ನಾಗಿ ಮಾಡಿಕೊಂಡರೆ ಗ್ರಾಮೀಣ ಪ್ರದೇಶಗಳಲ್ಲಿ ಜೀವನೋಪಾಯ ರೂಪಿಸಿಕೊಳ್ಳಬಹುದು ಮತ್ತು ಇದರಿಂದ ಕೆಲಸಕ್ಕಾಗಿ ನಗರ ಪ್ರದೇಶಗಳನ್ನು ಅವಲಂಬಿಸುವುದನ್ನು ತಡೆಯಬಹುದು ಎಂದು ಅಭಿಪ್ರಾಯಪಟ್ಟರು.

ತರಬೇತಿ ಸಂಯೋಜಕ ಡಾ.ವೆಂಕಟೇಗೌಡ, ಜೆ., ವಿಜ್ಞಾನಿ (ಬೇಸಾಯ ಶಾಸ್ತ್ರ) ಇವರು ತೆಂಗಿನ ಬೆಳೆಯಲ್ಲಿ ಸುಧಾರಿತ ಬೇಸಾಯ ಕ್ರಮಗಳು ಮತ್ತು ತೆಂಗಿನ ಬೇಸಾಯದಲ್ಲಿ ಉಪಯೋಗಿಸುವ ವಿವಿದ ಯಂತ್ರಗಳ ಬಗ್ಗೆ ಮಾಹಿತಿ ನೀಡಿದರು.

ಡಾ. ಎಂ.ಚಂದ್ರೇಗೌಡ, ನಿವೃತ್ತ ಪ್ರಾಧ್ಯಾಪಕರು, ತೋಟಗಾರಿಕೆ ವಿಭಾಗ, ಜಿಕೆವಿಕೆ, ಬೆಂಗಳೂರು ಇವರು ತೆಂಗಿನಲ್ಲಿ ಸುಧಾರಿತ ತಳಿಗಳು, ಆಯ್ಕೆ ಮತ್ತು ತೆಂಗಿನ ಉತ್ಪನ್ನಗಳ ಬಗ್ಗೆ ಮಾಹಿತಿ ನೀಡಿದರು.

ಡಾ.ವೀರನಾಗಪ್ಪ. ಪಿ., ವಿಜ್ಞಾನಿ (ಮಣ್ಣು ವಿಜ್ಞಾನ) ಇವರು ಮಣ್ಣು ಪರೀಕ್ಷೆ ಮಹತ್ವ ಮತ್ತು ತೆಂಗಿನ ಸಮಗ್ರ ಪೋಷಕಾಂಶಗಳ ಬಗ್ಗೆ ಮಾಹಿತಿ ನೀಡಿದರು. ಶ್ರೀ ಶಿವಪ್ರಸಾದ್, ಎಸ್., ಹಿರಿಯ ಸಂಶೋಧನಾ ಸಹಾಯಕರು, ARYA ಯೋಜನೆ ಇವರು ತೆಂಗಿಗೆ ಬರುವ ಪ್ರಮುಖ ರೋಗ ಹಾಗೂ ಕೀಟಗಳ ಬಗ್ಗೆ ತಿಳಿಸಿ, ಅವುಗಳ ನಿವಾರಣೆ ತಂತ್ರಗಳ ಬಗ್ಗೆ ರೈತರಿಗೆ ಅರಿವು ಮೂಡಿಸಿದರು.

ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಭರತ್, ಎಸ್.ಪಿ.ರವರು ಶಿಬಿರಾರ್ಥಿಗಳಿಗೆ ಸಾಧನವನ್ನು ಬಳಸಿ ತೆಂಗಿನ ಮರ ಹತ್ತುವ ಕೌಶಲ್ಯವನ್ನು ಹೇಳಿಕೊಟ್ಟರು, ಇದರಿಂದ ಪ್ರತಿಯೊಬ್ಬರೂ ತೆಂಗಿನ ಮರ ಹತ್ತಿ ಮರವನ್ನು ಶುಚಿ ಗೊಳಿಸುವುದು ಹಾಗೂ ಕಾಯಿ ಕೀಳುವ ಕಲೆಯನ್ನು ಕಲಿತರು.

ಶಿಬಿರಾರ್ಥಿಗಳಿಗೆ ತೆಂಗಿನ ಮರ ಹತ್ತುವ ಸಾಧನ, ಹೆಲ್ಮೆಟ್, ಕುಡುಗೋಲು ಮತ್ತು ಪ್ರಥಮ ಚಿಕಿತ್ಸೆ ಕಿಟ್‍ಗಳನ್ನು ಉಚಿತವಾಗಿ ನೀಡಲಾಯಿತು.

ತರಬೇತಿ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 20 ಜನ ಯುವಕರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ ತಾಲ್ಲೂಕು JDS ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ: ಪಕ್ಷ ಸಂಘಟನೆ ಸಹಕಾರಿಯೆಂದ ಪ್ರವೀಣ್ ಶಾಂತಿನಗರ

ದೊಡ್ಡಬಳ್ಳಾಪುರ ತಾಲ್ಲೂಕು JDS ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ: ಪಕ್ಷ ಸಂಘಟನೆ ಸಹಕಾರಿಯೆಂದ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ (JDS) ಪಕ್ಷಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ

[ccc_my_favorite_select_button post_id="121361"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]