ಬೆಂ.ಗ್ರಾ.ಜಿಲ್ಲೆ: ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ರವಿ ಗೆಲುವನ್ನು ಕಂಡಿದ್ದಾರೆ.
ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ ಸಂಬಂಧ ದೇವನಹಳ್ಳಿ ಪಟ್ಟಣದ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಸ್ಥಾಪಿಸಲಾದ ಮತ ಎಣಿಕೆ ಕೇಂದ್ರದಲ್ಲಿ, ಇಂದು ಮತ ಎಣಿಕೆ ಕಾರ್ಯ ನಡೆದಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಸ್.ರವಿ ಅವರು 2262 ಮತಗಳನ್ನು ಪಡೆದರು.
ಈ ಚುನಾವಣೆಯಲ್ಲಿ ಒಟ್ಟು 3919 ಮತಗಳು ಚಲಾವಣೆಯಾಗಿದ್ದು, 3856 ಮತಗಳು ಸಿಂದುವಾಗಿದ್ದರೆ, 56 ಮತಗಳು ಅಸಿಂದುವಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಎಸ್.ರವಿ 2262 ಮತಗಳನ್ನು ಪಡೆದು ಗೆಲುವನ್ನು ಕಂಡಿದ್ದರೆ. ಜೆಡಿಎಸ್ ಅಭ್ಯರ್ಥಿ ರಮೇಶ್ ಗೌಡ 1540 ಮತಗಳು, ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ 54 ಮತಗಳನ್ನು ಮಾತ್ರ ಪಡೆದಿದ್ದಾರೆ.
ಎಸ್.ರವಿ ಅವರ ಗೆಲುವಿನ ಅಂತರ 722 ಮತಗಳು ಎನ್ನಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….