ಕಡ್ಡಾಯವಾಗಿ ಡಿಸೆಂಬರ್‌ ಒಳಗೆ ಇ-ಶ್ರಮ್‌ ಕಾರ್ಡ್‌ ಮಾಡಿಸಿ: ಏನಿದು ಇ-ಶ್ರಮ್? ಉಪಯೋಗವೇನು?

ಬೆಂ.ಗ್ರಾ.ಜಿಲ್ಲೆ: ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಜಾರಿಗೆ ತಂದಿರುವ ಇ-ಶ್ರಮ್‌ ಯೋಜನೆಯಡಿ ಜಿಲ್ಲೆಯಲ್ಲಿರುವ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಡಿಸೆಂಬರ್‌ ಅಂತ್ಯದೊಳಗೆ ನೋಂದಣಿ ಮಾಡಿಸಬೇಕು ಎಂದು ಸಾಮಾನ್ಯ ಸೇವಾ ಕೇಂದ್ರದ ಜಿಲ್ಲಾ ವ್ಯವಸ್ಥಾಪಕ ಪ್ರಜ್ವಲ್ ಕರೆ ನೀಡಿದ್ದಾರೆ.

ಇ-ಶ್ರಮ್‌ ಯೋಜನೆಯಡಿ ನೋಂದಣಿ ಮಾಡಿಸಿಕೊಂಡರೆ ಕಾರ್ಮಿಕರು ಒಂದು ವರ್ಷಕ್ಕೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಆಕಸ್ಮಿಕ ಸಾವು ಅಥವಾ ಪೂರ್ಣ ಅಂಗವೈಕಲ್ಯತೆಗೆ ರೂ 2 ಲಕ್ಷ ಮತ್ತು ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ಪರಿಹಾರವನ್ನು ಪಡೆಯಬಹುದಾಗಿದೆ. ಜೊತೆಗೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಮತ್ತು ಕಲ್ಯಾಣ ಕಾರ್ಯಕ್ರಮಗಳ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದಲ್ಲದೇ ವಲಸೆ ಕಾರ್ಮಿಕರ ಉದ್ಯೋಗಾವಕಾಶಕ್ಕೂ ಸಹಾಯಕವಾಗಲಿದೆ ಎಂದಿದ್ದಾರೆ.

16 ರಿಂದ 59 ವರ್ಷದೊಳಗಿನ ವಯೋಮಾನದ ಅಸಂಘಟಿತ ಕಾರ್ಮಿಕರು ಆಧಾರ್‌ ಕಾರ್ಡ್‌, ಸಕ್ರಿಯ ಬ್ಯಾಂಕ್‌ ಖಾತೆ ಪಾಸ್‌ಬುಕ್‌ ಮತ್ತು ಸಕ್ರಿಯ ದೂರವಾಣಿ ಸಂಖ್ಯೆಯ ವಿವರಗಳನ್ನು ಇ-ಶ್ರಮ್‌ ಪೋರ್ಟಲ್‌ನಲ್ಲಿ ನಮೂದಿಸುವ ಮೂಲಕ ನೇರವಾಗಿ ತಮ್ಮ ಸ್ಮಾರ್ಟ್‌ ಫೋನ್‌ನಲ್ಲೇ ನೋಂದಣಿ ಮಾಡಿಕೊಳ್ಳಬಹುದು. ಇಲ್ಲವೆ ತಮಗೆ ಸಮೀಪವಿರುವ ಸಾಮಾನ್ಯ ಸೇವಾ ಕೇಂದ್ರಗಳಿಗೆ ಅಗತ್ಯ ದಾಖಲೆಗಳೊಂದಿಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಸಿಕೊಳ್ಳಬಹುದು. ನೋಂದಣಿಗೆ ಯಾವುದೇ ರೀತಿಯ ತೊಡಕುಂಟಾದಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದ ಕಾರ್ಮಿಕ ಇಲಾಖೆಯ ಕಚೇರಿಗಳನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಮತ್ತು ಸಹಾಯ ಪಡೆದು ನೋಂದಣಿ ಮಾಡಿಕೊಳ್ಳಬಹುದು ಎಂದರು.

ಸಂಪೂರ್ಣ ಉಚಿತ: ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಕೇಂದ್ರದವರೆಗೆ ಜಿಲ್ಲೆಯಾದ್ಯಂತ 220 ಸಾಮಾನ್ಯ ಸೇವಾ ಕೇಂದ್ರಗಳಿವೆ. ಸಾರ್ವಜನಿಕರು ತಮ್ಮ ಸಮೀಪದ ಕೇಂದ್ರಗಳಿಗೆ ತೆರಳಿ ನೋಂದಾಯಿಸಿಕೊಳ್ಳಬಹುದು. ಅರ್ಜಿ ನೋಂದಣಿ ಮಾಡಲು ಹಾಗೂ ನೋಂದಣಿಯಾದ ಪ್ರತಿಯನ್ನು ಪಡೆಯಲು ಪ್ರತಿ ನೋಂದಣಿಗೆ ಸಂಬಂಧಿತ ಸಾಮಾನ್ಯ ಸೇವಾ ಕೇಂದ್ರಗಳಿಗೆ ಕೇಂದ್ರ ಸರ್ಕಾರವೇ ಸೇವಾ ಶುಲ್ಕ ನೀಡಲಿದೆ. ನೋಂದಣಿ ಮಾಡಲು ಹಣದ ಬೇಡಿಕೆ ಇಡುವ ಸಾಮಾನ್ಯ ಸೇವಾ ಕೇಂದ್ರಗಳನ್ನು ಕೂಡಲೇ ಅಮಾನತು ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಡಿಸೆಂಬರ್‌ ಅಂತ್ಯಕ್ಕೆ ನೋಂದಣಿ ಮುಗಿಸಿ: ಜಿಲ್ಲೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಸಣ್ಣ ಮತ್ತು ಅತಿ ಸಣ್ಣ ರೈತರು, ಮೀನುಗಾರರು, ಪಶು ಸಂಗೋಪನಗಾರರು, ನೇಕಾರರು, ಬಡಗಿ ಕೆಲಸಗಾರರು, ಆಶಾ ಕಾರ್ಯಕರ್ತರು, ಫೋಟೋಗ್ರಾಫರ್‌ಗಳು, ಕ್ಷೌರಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಮನೆಕೆಲಸಗಾರರು, ಪತ್ರಿಕೆ ಮಾರಾಟಗಾರರು, ಚಾಲಕರು, ಕೂಲಿ ಕಾರ್ಮಿಕರು (ನರೇಗಾ) ಬೀದಿ ವ್ಯಾಪಾರಿಗಳು, ಅಂಗಡಿ ವ್ಯಾಪಾರಸ್ಥರು, ಚರ್ಮ ಕೈಗಾರಿಕಾ ಕಾರ್ಮಿಕರು, ಆನ್‌ ಲೈನ್‌ ಸೇವಾ ಕಾರ್ಮಿಕರು, ಟೈಲರ್‌ಗಳು, ಹೊಟೇಲ್‌ ಕಾರ್ಮಿಕರು, ಬೇಕರಿ ವ್ಯಾಪಾರಸ್ಥರು, ವಲಸೆ ಕಾರ್ಮಿಕರು, ಮತ್ತು ಮೆಕಾನಿಕ್‌ ಹಾಗೂ ಇನ್ನಿತರ ಅಸಂಘಟಿತ ಕಾರ್ಮಿಕರು ನೋಂದಣಿ ಮಾಡಿಕೊಳ್ಳಬಹುದು ಎಂದವರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!