ದೊಡ್ಡಬಳ್ಳಾಪುರ: ತಾಲೂಕಿನ ವಿವಿಧ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ಹನುಮ ಜಯಂತಿಯನ್ನು ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳು ನಡೆದವು. ಇದರ ಅಂಗವಾಗಿ ಲೋಕ ಕಲ್ಯಾಣಾರ್ಥವಾಗಿ ಶ್ರೀರಾಮ ತಾರಕ ಹೋಮ, ವಿಷ್ಣು ಸಹಸ್ರನಾಮ ಪಾರಾಯಣ, ಸಂಜೆ ಕರೇನಹಳ್ಳಿಯ ಶ್ರೀ ರಾಮ ಭಜನೆ ಮಂಡಲಿಯಿಂದ ಭಜನಾ ಕಾರ್ಯಕ್ರಮ ಹಾಗೂ ಸ್ವಾಮಿಯ ಪ್ರಾಕಾರೋತ್ಸವ ನಡೆಯಿತು.
ತಾಲೂಕಿನ ರಾಜಘಟ್ಟದ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ಆಂಜನೇಯ ಹಾಗೂ ಶ್ರೀರಾಮ ಚಂದ್ರ ಮೂರ್ತಿಗಳಿಗೆ ಹೂವಿನ ಅಲಂಕಾರ ಮಾಡಲಾಗಿತ್ತು. ಈ ನೂರಾರು ಭಕ್ತಾದಿಗಳು ಶ್ರದ್ದಾ ಭಕ್ತಿಗಳಿಂದ ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು.
ರೋಜಿಪುರದ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ನಡೆದ 11 ದಿನಗಳ ಭಜನೆ ಕಾರ್ಯಕ್ರಮದ ಸಮಾರೋಪ ನಡೆಯಿತು. ಗಣಪತಿ ಪೂಜೆ, ಪಂಚಾಮೃತ ರಾಮತಾರಕ ಹೋಮ, ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳು ನಡೆದು ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ರಂಗಪ್ಪ ಸರ್ಕಲ್ ರಾಮಣ್ಣ ಬಾವಿ ಬಳಿಯ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ವಿಶೇಷ ಅಲಂಕಾರ ಮಾಡಲಾಗಿತ್ತು.
ರೇಲ್ವೆ ಸ್ಟೇಷನ್ ಬಳಿಯಿರುವ ಪ್ರಸನ್ನ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಅಲಂಕಾರ ಹಾಗೂ ಅನ್ನಸಂತರ್ಪಣೆ ನಡೆಯಿತು.
ನಗರದ ಹೊರವಲಯದಲ್ಲಿ ದರ್ಗಾಪುರದ ರಾಮ ಭಕ್ತಾಂಜನೇಯ ದೇವಾಲಯದಲ್ಲಿ ಸ್ವಾಮಿಗೆ ಮುತ್ತಿನ ಅಲಂಕಾರ,ಪಲ್ಲಕ್ಕಿ ಉತ್ಸವ ನಡೆಸಲಾಯಿತು.
ತಾಲೂಕಿಗೆ ಸಮೀಪದ ಬನ್ನಿಮಂಗಲದ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮಜಯಂತಿ ಉತ್ಸವ, ನೆರವೇರಿದವು.
ತಾಲೂಕಿನ ಮಜರಾಹೊಸಹಳ್ಳಿ ಗ್ರಾಮದ ಶ್ರೀ ಅಭಯ ಆಂಜನೇಯ ಸ್ವಾಮಿ, ಮಧುರೆ ಕರೆ ಏರಿ ಮೇಲಿನ ಆಂಜನೇಯ ಸ್ವಾಮಿ, ಕೋಳೂರು ಆಂಜನೇಯಸ್ವಾಮಿ, ಸಿದ್ದೇನಾಯಕನ ಹಳ್ಳಿ, ಅರಳುಮಲ್ಲಿಗೆ ಕೆರೆ ಏರಿ ಅಭಯ ಆಂಜನೇಯಸ್ವಾಮಿ, ರಂಗಪ್ಪ ಸರ್ಕಲ್, ಶಿವಪುರ ಗೇಟ್, ಕೆರೆ ಏರಿ ಆಂಜನೇಯಸ್ವಾಮಿ, ರಾಗಿರಾಯನ ಗುಡ್ಡ ಮೊದಲಾಗಿ ನಗರ ಹಾಗೂ ತಾಲೂಕಿನ ವಿವಿಧ ದೇವಾಲಯಗಳಲ್ಲಿ ಆಂಜನೇಯಸ್ವಾಮಿಗೆ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳು ನೆರವೇರಿದವು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….