ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ಬಳಿಯಿರುವ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಶ್ವಾಸಕೋಶದ ತೊಂದರೆಗಳಿಗೆ ಉಚಿತ ಆಯುರ್ವೇದ ಔಷಧ ನೀಡಲಾಗುತ್ತಿದೆ.
ಮಾರ್ಗಶಿರ ಹುಣ್ಣಿಮೆ, ಶುಕ್ಲಪಕ್ಷದ ದಿನವಾದ ಡಿ.18ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಶ್ವಾಸಕೋಶದ ತೊಂದರೆಗಳಾದ ಕೆಮ್ಮು, ಶೀತ ,ಗಂಟಲು ಬೇನೆ ,ಆಸ್ತಮ ಇತ್ಯಾದಿಗಳಿಗೆ ಆಯುರ್ವೇದದ ವಿಶೇಷ ಔಷಧಿಯನ್ನು ಉಚಿತವಾಗಿ ನೀಡಲಾಗುತ್ತಿದೆ.
ಸಾರ್ವಜನಿಕರು ಈ ಸೌಲಭ್ಯದ ಉಪಯೋಗ ಪಡೆಯಬಹುದಾಗಿದೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….