ಬೆಳಗಾವಿ: 2030ರೊಳಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವ ಬಿ.ಸಿ.ನಾಗೇಶ್, 2030ರೊಳಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಟಾಸ್ಕ್ ಪೋರ್ಸ್ ಸಮಿತಿ ರಚನೆ ಆಗಿದೆ. ಅಂಗನವಾಡಿ ಮತ್ತು ಪ್ರಾಥಮಿಕ ಶಿಕ್ಷಣ ಶಿಕ್ಷಕರಿಗೆ ತರಬೇತಿ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಮುಂದಿನ ವರ್ಷದಲ್ಲಾದ್ರೂ ರಾಷ್ಟ್ರೀಯ ಶಿಕ್ಷಣ ನೀತಿ ಪರಿಚಯಿಸುವ ಇರಾದೆ ಇದೆ. ಆತುರವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಪರಿಚಯಿಸುವುದಿಲ್ಲ. ತರಬೇತಿ ಕೊಡದೇ ಎನ್ ಇಪಿ ಪರಿಚಯಿಸುವುದಿಲ್ಲ ಎಂದು ಹೇಳಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….