ಜಕ್ಕಲಮೊಡಗು ಕ್ರಾಸ್ ನ ಸೇತುವೆ ಬಳಿ ನೀರಿಗೆ ಅಪಾಯಕಾರಿ ರಾಸಾಯನಿಕ ತ್ಯಾಜ್ಯ ಸೇರ್ಪಡೆ ಆತಂಕ: ವಿವಿಧ ಇಲಾಖೆಗಳಿಂದ ಜಂಟಿ ಸಮೀಕ್ಷೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮತ್ತು  ಗೌರಿಬಿದನೂರು ಮಾರ್ಗ ಮಧ್ಯೆಯಿರುವ ಜಕ್ಕಲಮೊಡಗು ಕ್ರಾಸ್ ನ  ಸೇತುವೆ ಬಳಿ  ಯಾರೋ  ಕಿಡಿಗೇಡಿಗಳು ಟ್ಯಾಂಕರ್ ನಲ್ಲಿ ವಿಷಯುಕ್ತ ರಾಸಾಯನಿಕ ತ್ಯಾಜ್ಯ ನೀರನ್ನು ವಿಲೇವಾರಿ ಮಾಡುವ ಮೂಲಕ ಶ್ರೀನಿವಾಸ ಸಾಗರ ಜಲಾಶಯದ ನೀರಿಗೆ  ಸೇರುವಂತೆ ಮಾಡಿದ್ದಾರೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ  ಬುಧವಾರ  ಪರಿಸರ, ಪೊಲೀಸ್, ಕಂದಾಯ ಮೀನುಗಾರಿಕೆ , ಸಣ್ಣ ನೀರಾವರಿ, ಅರಣ್ಯ,  ಕೈಗಾರಿಕೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್  ಇಲಾಖೆ ಸೇರಿದಂತೆ ವಿವಿಧ  ಇಲಾಖೆಗಳ ಅಧಿಕಾರಿಗಳ ತಂಡ ಸದರಿ ಸ್ಥಳಕ್ಕೆ  ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸುವ ಮೂಲಕ ಮಾಹಿತಿ ಕಲೆ ಹಾಕಿತು.

ಈ ಸಂದರ್ಭದಲ್ಲಿ ಜಿಲ್ಲಾ ಪರಿಸರ ಅಧಿಕಾರಿ  ಸಿದ್ಧೇಶ್ವರ ಬಾಬು ರವರು  ಮಾತನಾಡಿ, ಜಕ್ಕಲಮಡುಗು ಕ್ರಾಸ್ ಹಾಗೂ ಶ್ರೀನಿವಾಸ್ ಸಾಗರದ ಬಳಿ ವಿಸರ್ಜಿಸಲಾಗಿರುವ ರಾಸಾಯನಿಕ ತ್ಯಾಜ್ಯ ನೀರು (ಜನರಲ್ ಪ್ಯಾರಾಮೀಟರ್, ಆಯಿಲ್ ಅಂಡ್ ಗ್ರೀಸ್, ಹೆವಿ ಮೆಟಲ್ ಮತ್ತು ಸೈನೈಡ್) ಮತ್ತು ಮಣ್ಣಿನ ಮಾದರಿ ಸಂಗ್ರಹಿಸಲಾಗಿರುತ್ತದೆ ಹಾಗೂ ಶ್ರೀನಿವಾಸ ಸಾಗರ ಜಲಾಶಯದ ನೀರನ್ನು ಸಹ ಸಂಗ್ರಹಿಸಲಾಗಿ ವಿಶ್ಲೇಷಣೆಗಾಗಿ ಬೆಂಗಳೂರಿನ ಕೇಂದ್ರ ಪರಿಸರ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. 

ಕೇಂದ್ರ ಪರಿಸರ ಪ್ರಯೋಗಾಲಯದ ಅಧಿಕಾರಿಗಳಿಗೆ ಶೀಘ್ರದಲ್ಲಿ ವಿಶ್ಲೇಷಣಾ ವರದಿಯನ್ನು ನೀಡುವಂತೆ ಕೋರಲಾಗಿರುತ್ತದೆ. ವಿಶ್ಲೇಷಣಾ ವರದಿ ಬಂದ ನಂತರ ವರದಿಯನ್ನು ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಮಂಡಳಿಯ ಕೇಂದ್ರ ಕಛೇರಿಗೆ ಸದರಿ ವಿಷಯದ ಬಗ್ಗೆ ವರದಿಯನ್ನು ಸಲ್ಲಿಸಿ ಮುಂದಿನ ಕ್ರಮವಹಿಸಲಾಗುವುದು ಎಂದರು. 

ವಿಷಯುಕ್ತ ರಾಸಾಯನಿಕ ತ್ಯಾಜ್ಯ ನೀರನ್ನು  ವಿಲೇವಾರಿ ಮಾಡಿ ಹೋಗಿರುವ ಕಿಡಿಗೇಡಿಗಳ ಪತ್ತೆಗಾಗಿ ಈಗಾಗಲೇ ಪೊಲೀಸ್ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಈ ಘಟನೆಗೆ ಕಾರಣರಾದವರ  ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದುಎಂದು ಪೊಲೀಸ್ ಉಪಾಧೀಕ್ಷಕ ವಾಸುದೇವ್ ಅವರು ತಿಳಿಸಿದರು.

ಇದೇ  ವೇಳೆ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಮಾಧುರಿ ಮಾತನಾಡಿ,  ಸದ್ಯಕ್ಕೆ  ಶ್ರೀನಿವಾಸಸಾಗರ  ಜಲಾಶಯದಲ್ಲಿ ಮೀನು ಹಿಡಿಯದಂತೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಜೊತೆಗೆ ಈ ಕೆರೆಯ   ನೀರು ಮತ್ತು ಮೀನನ್ನು ಪರೀಕ್ಷೆಗಾಗಿ ಬೆಂಗಳೂರಿನ ಹೆಬ್ಬಾಳದಲ್ಲಿರುವ ಪಶು ಸಂಶೋಧನಾ ಕೇಂದ್ರದ  ಪ್ರಯೋಗಾಲಯಕ್ಕೆ  ಕಳುಹಿಸಿ ಕೊಡಲು ಕ್ರಮವಹಿಸಲಾಗಿದೆ ಎಂದರು. 

ಪ್ರಯೋಗಾಲಯದ ವರದಿ ಬರುವವರೆಗೆ ಸುತ್ತಮುತ್ತಲ ಗ್ರಾಮಗಳ ಜನರು ತಮ್ಮ  ಜಾನುವಾರುಗಳಿಗೂ ಸಹ ಈ ಕೆರೆಯ ನೀರನ್ನು  ಕುಡಿಸದಂತೆ ಡಂಗೂರ ಸಾರುವ ಮೂಲಕ ಜಾಗೃತಿ ಮೂಡಿಸುವಂತೆ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರಿಗೆ ಸೂಚಿಸಲಾಗಿದೆ  ಜೊತೆಗೆ ಜನರು  ಕೂಡ  ಈ ನೀರನ್ನು ಕುಡಿಯುವ ಉದ್ದೇಶಕ್ಕೆ ಬಳಸದಂತೆ  ಚಿಕ್ಕಬಳ್ಳಾಪುರ ತಾಲೂಕು ಪಂಚಾಯಿತಿ  ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ರವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಂಟಿ ಸಮೀಕ್ಷೆಯಲ್ಲಿ ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ಶರೀಫ್, ತಹಸೀಲ್ದಾರ್ ಗಣಪತಿಶಾಸ್ತ್ರಿ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ (ಎಚ್.ಎನ್ ವ್ಯಾಲಿ ಯೋಜನೆ)ಯ ಸಹಾಯಕ ಕಾರ್ಯಪಾಲಕ ಅಭಿಯಂತರ ರವೀಂದ್ರನಾಥ್,  RFO  ಲಕ್ಷ್ಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು  ಭಾಗಿಯಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!