ಕೋಲಾರ: ಪಾರ್ಶ್ವವಾಯುಗೆ ತುತ್ತಾಗಿ, ಇಲ್ಲಿನ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದ ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ (96) ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಮನೆಯಲ್ಲಿದ್ದ ಅವರು ಪಾರ್ಶ್ವವಾಯುಗೆ ತುತ್ತಾಗಿದ್ದು, ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು ಈ ಹಿನ್ನಲೆಯಲ್ಲಿ ಅವರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಾಲಪ್ಪ ಅವರು ಇಂದು ನಿಧರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೂರು ಮಂದಿ ಗಂಡುಮಕ್ಕಳು, ನಾಲ್ಕುಜನ ಹೆಣ್ಣು ಮಕ್ಕಳು ಸೇರಿದಂತೆ, ಅಪಾರ ಅಭಿಮಾನಿಗಳನ್ನು ಜಾಲಪ್ಪ ಅಗಲಿದ್ದಾರೆ.
ಇಂದು ರಾತ್ರಿಯೇ ಸ್ವಗ್ರಾಮದಲ್ಲಿ ತೂಬಗೆರೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಲಪಿಸಿ, ನಂತರ ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಕಾಲೇಜಿನ ಆವರಣದಲ್ಲಿ ಅಂತ್ಯ ಸಂಸ್ಕಾರ ನಡೆಸಲು ಸಿದ್ದತೆ ನಡೆಸಲಾಗಿದೆ ಎನ್ನಲಾಗುತ್ತಿದೆ.
ಶುಕ್ರವಾರ ಮಧ್ಯಾಹ್ನದಿಂದಲೇ ಜಾಲಪ್ಪರ ಅಗಲಿಕೆ ಕುರಿತು ತೀವ್ರ ಪರ ವಿರೋಧ ಚರ್ಚೆ ನಡೆದು. ಕುಟುಂಬಸ್ಥರು ಸಾವನಪ್ಪಿಲ್ಲವೆಂದು ಘೋಷಿಸಿದ್ದರು. ಇದರ ನಡುವೆಯೇ. ಅವರ ಅಗಲಿಕೆ ಕುಟುಂಬಕ್ಕೆ ನೋವನ್ನು ತರಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….