ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನ ತಿರುವ ಪಡೆಯುವ ವೇಳೆ ಅಪರಿಚತ ವಾಹನ ಡಿಕ್ಕಿ ಹೊಡೆದು, ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಸುಮಾರು 60 ವರ್ಷದ ವೃದ್ಧೆ ಆಯತಪ್ಪಿ ಬಿದ್ದ ವೇಳೆ ವಾಹನ ಮೇಲರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಡಿ.ಕ್ರಾಸ್ ಬಳಿ ಸಂಭವಿಸಿದೆ.
ಮೃತ ವೃದ್ಧೆಯನ್ನು ಗೌರಿಬಿದನೂರು ತಾಲೂಕಿನ ಬೇವಿನಹಳ್ಳಿ ಮೂಲದವರೆನ್ನಲಾಗಿದ್ದು, ಮಾಹಿತಿ ಪಡೆಯಲಾಗುತ್ತಿದೆ.
ಅಪಘಾತ ಮಾಡಿದೆ ಎನ್ನಲಾಗುತ್ತಿರುವ 407 ವಾಹನ ಪರಾರಿಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಘಟನೆ ಕುರಿತಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….