ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ ರಸ್ತೆ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಅಭಿವೃದ್ಧಿ ಟ್ರಸ್ಟ್‍ನ ವತಿಯಿಂದ 48ನೇ ವರ್ಷದ ವಾರ್ಷಿಕ ಮಂಡಲ ಪೂಜಾ ಕಾರ್ಯಕ್ರಮಗಳನ್ನು ಡಿಸೆಂಬರ್ 19ರಂದು ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 5 ಗಂಟೆಯಿಂದ ಗಣಹೋಮ, ಅಯ್ಯಪ್ಪಸ್ವಾಮಿ ಭಜನೆ ನಡೆಯಲಿದೆ. ಮಧ್ಯಾಹ್ನ 12 ಕ್ಕೆ ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ನಾಡೋಜ ಡಾ.ವೂಡೇ ಪಿ.ಕೃಷ್ಣ ಆಶೀರ್ವಚನ ನೀಡಲಿದ್ದಾರೆ. ನಂತರ ಕ್ಯಾಲೆಂಡ್ ಬಿಡುಗಡೆ ಹಾಗೂ ದಾನಿಗಳಿಗೆ ಸನ್ಮಾನ ಆ ನಂತರ ಅನ್ನಸಂತರ್ಪಣೆಯಿರುತ್ತದೆ.
ಸಂಜೆ 4 ಕ್ಕೆ ನಗರದ ಪ್ರಮುಖ ಬೀದಿಗಳಲ್ಲಿ ನಾಗಮಂಗಲದ ರುದ್ರೇಶ್ ಮತ್ತು ತಂಡದಿಂದ ವೀರಗಾಸೆ ಮತ್ತು ವೀರಭದ್ರ ಕುಣಿತ ಮೊದಲಾದ ಕಲಾತಂಡಗಳೊಡನೆ ಅಯ್ಯಪ್ಪ ಸ್ವಾಮಿ ಜ್ಯೋತಿಯ ಮೆರವಣಿಗೆ ನಡೆಯುತ್ತದೆ ಎಂದು ಸಮಿತಿ ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….