ನೆನಪಿನ ಬುತ್ತಿ: ಲೋಕಸಭೆಗೆ ಆರು ಬಾರಿ ಸ್ಪರ್ಧಿಸಿದ್ದ ಆರ್.ಎಲ್.ಜಾಲಪ್ಪ

ದೊಡ್ಡಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ಹಿಂದುಳಿದ ವರ್ಗಗಳ ನಾಯಕರೆಂದೇ ಹೆಸರು ಮಾಡಿರುವ ಆರ್.ಎಲ್.ಜಾಲಪ್ಪ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಗ್ರಾಮದವರು.

1925 ಅಕ್ಟೋಬರ್ 19 ರಂದು ಜನಿಸಿದ್ದ ಆರ್.ಎಲ್.ಜಾಲಪ್ಪ ಅವರು ಬಿ.ಎ.ಪದವೀಧರರು. ಜಾಲಪ್ಪ ಅವರ ಸೇವೆಯನ್ನು ಗೌರವಿಸಿ ರಾಜ್ಯ ಸರ್ಕಾರ ದೇವರಾಜ ಅರಸು ಪ್ರಶಸ್ತಿ ನೀಡಿ ಗೌರವಿಸಿದೆ. 

‘ಕಾಮೆಡ್ ಕೆ’ ಅಧ್ಯಕ್ಷರಾಗಿಯು ಹಲವಾರು ವರ್ಷಗಳಕಾಲ ಸೇವೆಸಲ್ಲಿಸಿದ್ದರು. ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವಲ್ಲಿ ಆರ್.ಎಲ್.ಜಾಲಪ್ಪ ಅವರದ್ದು ಪ್ರಮುಖ ಪಾತ್ರ.

ಪ್ರಭಾವಿ ರಾಜಕಾರಣಿಯಾಗಿದ್ದ ಆರ್.ಎಲ್.ಜಾಲಪ್ಪ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸ್ಪರ್ಧಿಸಿದ್ದರು. ಜನತಾಪಕ್ಷ, ಜನತಾದಳ ಮತ್ತು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಅವರು ಎರಡು ಬಾರಿ ಸೋಲು ಕಂಡರೆ, ನಾಲ್ಕು ಬಾರಿ ಗೆಲುವು ಸಾಧಿಸಿದ್ದರು.

1984ರಲ್ಲಿ ಜನತಾಪಕ್ಷದಿಂದ, 1991ರಲ್ಲಿ ಜನತಾದಳದಿಂದ ಸ್ಪರ್ಧಿಸಿ ಈ ಎರಡು ಚುನಾವಣೆಗಳಲ್ಲೂ ಸೋಲು ಅನುಭವಿಸಿದರು.1996ರಲ್ಲಿ ಜನತಾದಳದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಆರ್.ಎಲ್.ಜಾಲಪ್ಪ ಅವರು ಅದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿಯಾದ  ಎಚ್.ಡಿ.ದೇವೇಗೌಡರ ಸಂಪುಟದಲ್ಲಿ ಜವಳಿ ಮಂತ್ರಿಯಾಗಿದ್ದರು. 1998ರಲ್ಲಿ ನಡೆದ ಲೋಕಸಭಾ ಚುನಾವಣೆಯ ವೇಳೆಗೆ ಅವರು ಜನತಾದಳ ತೊರೆದು ಕಾಂಗ್ರೆಸ್ ಪಕ್ಷ ಸೇರಿ ಮತ್ತೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ನಂತರ 1999 ಮತ್ತು 2004 ರಲ್ಲೂ ಸಹ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸಂಸದರಾಗಿ ಆಯ್ಕೆಯಾದರು.

ಆರ್.ಎಲ್.ಜಾಲಪ್ಪ ಕೇಂದ್ರ ಸರ್ಕಾರದಲ್ಲಿ 1996 ರಿಂದ 1998ರ ತನಕ ಜವಳಿ ಸಚಿವರಾಗಿದ್ದರು. 1998-99ನೇ  ಸಾಲಿನಲ್ಲಿ ಕೇಂದ್ರ ಸರ್ಕಾರದ ಹಣಕಾಸು ಸಮಿತಿ, ಸಂಸತ್ತಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಸಮಿತಿ, ಕೃಷಿ ಸಚಿವಾಲಯ ಸಲಹಾ ಸಮಿತಿಗಳಿಗೆ  ಸದಸ್ಯರಾಗಿದ್ದರು. 1999 – 2000ರಲ್ಲಿ ನಗರ ಮತ್ತು ಗ್ರಾಮೀಣ ಅಭಿವೃದ್ದಿ ಸಮಿತಿ ಸದಸ್ಯರಾಗಿದ್ದರು. 2006ರಲ್ಲಿ ಮಾನವ ಸಂಪನ್ಮೂಲ ಅಭಿವೃದ್ದಿ ಸಮಿತಿಯ ಸದಸ್ಯರಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy)

[ccc_my_favorite_select_button post_id="109828"]
ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅವಕಾಶ: ಡಾ.ಮಹೇಶ್ ಜೋಶಿ

ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು

ಕನ್ನಡ ಭಾಷೆಯು ಸ್ವತಂತ್ರ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ (Dr.Mahesh Joshi)

[ccc_my_favorite_select_button post_id="109751"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]