ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅತಿವೃಷ್ಟಿ/ಪ್ರವಾಹದಿಂದ ಉಂಟಾಗಿರುವ ಹಾನಿಯ ಸರ್ವೇಕ್ಷಣೆ ನಡೆಸಲು ಜಿಲ್ಲೆಗೆ ಆಗಮಿಸಿರುವ ಕೇಂದ್ರ ವಿಪತ್ತು ಅಧ್ಯಯನ ತಂಡದ (Inter Ministerial Central Team) ಮುಖ್ಯಸ್ಥರಾದ ಸುಶಿಲ್ ಪಾಲ್(ಮುಖ್ಯ ನಿಯಂತ್ರಕರು, ಲೆಕ್ಕಪತ್ರ, ಭಾರತ ಸರ್ಕಾರ), ಸದಸ್ಯರಾದ ಸುಭಾಷ್ ಚಂದ್ರ (ನಿರ್ದೇಶಕರು, ಕೃಷಿ ಇಲಾಖೆ, ಭಾರತ ಸರ್ಕಾರ) ಅವರು ಇಂದು ದೇವನಹಳ್ಳಿ ತಾಲ್ಲೂಕಿನ ಹಿರೇಅಮಾನಿಕೆರೆ ಆವರಣಕ್ಕೆ ಭೇಟಿ ನೀಡಿ ಕೆರೆ ಕೋಡಿ ಬಿದ್ದಿರುವುದನ್ನು ವೀಕ್ಷಿಸಿದರು ನಂತರ ಕೆರೆ ಸುತ್ತಮುತ್ತಲಿನ ಪ್ರದೇಶದ ರೈತರ ಜಮೀನಿಗೆ ಭೇಟಿ ನೀಡಿ ಶುಂಠಿ, ಚೆಂಡು ಹೂ, ರಾಗಿ, ತೊಗರಿ ಸೇರಿ ಇನ್ನಿತರ ಬೆಳೆ ಹಾನಿಯಾದುದನ್ನು ಗಮನಿಸಿ ರೈತರಿಂದ ಮಾಹಿತಿ ಸಂಗ್ರಹಿಸಿದರು.
ನಂತರ ಕೇಂದ್ರ ವಿಪತ್ತು ಅಧ್ಯಯನ ತಂಡವು ದೊಡ್ಡಬಳ್ಳಾಪುರ ತಾಲ್ಲೂಕಿನ ರೋಜಿಪುರ ಗ್ರಾಮಕ್ಕೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿತು.
ಈ ಸಂದರ್ಭದಲ್ಲಿ ರಾಜ್ಯ ಕೆಎಸ್‌ಡಿಎಂಎ ಆಯುಕ್ತರಾದ ಡಾ.ಮನೋಜ್ ರಾಜನ್, ಅಪರ ಕೃಷಿ ನಿರ್ದೇಶಕರಾದ ಬಿ.ಬಸವರಾಜು, ಅಪರ ತೋಟಗಾರಿಕಾ ನಿರ್ದೇಶಕರಾದ ಬಿ.ಕೆ.ದುಂಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ರೇವಣಪ್ಪ, ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಸ್ವಾಮಿ, ಉಪ ನಿರ್ದೇಶಕಿ ವಿನುತಾ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….