ದೊಡ್ಡಬಳ್ಳಾಪುರದಲ್ಲಿ ಅಯ್ಯಪ್ಪಸ್ವಾಮಿ ಮಂಡಲ ಪೂಜಾ ಕಾರ್ಯಕ್ರಮ: ಸತ್ಕಾರ್ಯಗಳ ಮೂಲಕ ಬದುಕು ಸಾರ್ಥಕಪಡಿಸಿಕೊಳ್ಳಿ – ನಾಡೋಜ ಡಾ.ವೂಡೇ ಪಿ.ಕೃಷ್ಣ

ದೊಡ್ಡಬಳ್ಳಾಪುರ: ನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಅಭಿವೃದ್ಧಿ ಟ್ರಸ್ಟ್‍ನ ವತಿಯಿಂದ 48ನೇ ವರ್ಷದ ವಾರ್ಷಿಕ ಮಂಡಲ ಪೂಜಾ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿ ಸಂಭ್ರಮಗಳಿಂದ ನೆರವೇರಿತು.

ಮಂಡಲ ಪೂಜಾ ಕಾರ್ಯಕ್ರಮದ ಅಂಗವಾಗಿ ದೇವಾಲಯದಲ್ಲಿ ಶ್ರೀ ಗಣ ಹೋಮ ನಡೆಯಿತು. ಶ್ರೀ ಅಯ್ಯಪ್ಪಸ್ವಾಮಿ, ಶ್ರೀ ಗಣೇಶ ಹಾಗೂ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಅಲಂಕಾರಗಳನ್ನು ಮಾಡಲಾಗಿತ್ತು. ಅಯ್ಯಪ್ಪ ವ್ರತಧಾರಿಗಳಿಂದ ಸಾಮೂಹಿಕ ಭಜನೆ ನಡೆಯಿತು.ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು.

ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ನಾಡೋಜ ಡಾ.ವೂಡೇ ಪಿ.ಕೃಷ್ಣ ಆಶೀರ್ವಚನ ನೀಡಿ, ಶಾಂತಿ, ನೆಮ್ಮದಿಯ ಬದುಕಿಗಾಗಿ ಸತ್ಸಂಗ, ಶಿಸ್ತು ಹಾಗೂ ಭಕ್ತಿ ಪ್ರಮುಖ ಪಾತ್ರವಹಿಸುತ್ತವೆ. ಬಾಹ್ಯ ಶ್ರೀಮಂತಿಕೆಗಿಂತ ಅಂತರಿಕ ಶ್ರೀಮಂತಿಕೆ ಮುಖ್ಯವಾಗಿದ್ದು, ಎಲ್ಲ ಜೀವಿಗಳಲ್ಲಿಯೂ ದೇವರನ್ನು ಕಾಣಬೇಕು. ಹಣವೊಂದೇ ಎಲ್ಲಾ ತೃಪ್ತಿಯನ್ನು ನೀಡುವುದಿಲ್ಲ. ಆದ್ಯಾತ್ಮಕತೆ ನಮ್ಮ ಹೃದಯ ಶ್ರೀಮಂತಿಕೆಯನ್ನು ಹೆಚ್ಚಿಸುತ್ತದೆ.  ಎಲ್ಲವನ್ನೂ ಬಯಸಲು ಆಸೆ ಪಟ್ಟು ನೆಮ್ಮದಿ ಕಳೆದುಕೊಳ್ಳುವುದಕ್ಕಿಂತ ಇರುವುದರಲ್ಲಿ ನೆಮ್ಮದಿ ಕಾಣಬೇಕು. ಸೇವಾ ಮನೋಭಾವ, ಸಮಾಜಮುಖಿ ಚಿಂತನೆಗಳಿಂದ ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕಿದೆ. ನಮ್ಮ ಸಂಸ್ಕೃತಿ, ಆಚರಣೆಗಳ ಅರಿವನ್ನು ಮೂಡಿಸಬೇಕಾದರೆ ಮಕ್ಕಳಿಗೆ ಆದ್ಯಾತ್ಮಿಕ ತಿಳುವಳಿಕೆ, ಸಂಸ್ಕಾರ ಕಲಿಸಬೇಕಿದೆ ಎಂದರು.

ಇದೇ ವೇಳೆ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಅಭಿವೃದ್ಧಿ ಟ್ರಸ್ಟ್ ಹೊರತಂದಿರುವ 2022ನೇ ಇಸವಿಯ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.

ಬೆಂಗಳೂರಿನ ವಲಯ ಉಪವಿಭಾಗಾಕಾರಿ ರಂಗನಾಥ್, ಶ್ರೀ ಅಯ್ಯಪ್ಪಸ್ವಾಮಿ ಸೇವಾ ಅಭಿವೃದ್ಧಿ ಟ್ರಸ್ಟ್‍ನ ಅಧ್ಯಕ್ಷ ಮಹದೇವಯ್ಯ, ಕಾರ್ಯದರ್ಶಿ ಬಿ.ವಿ.ಬಸವರಾಜು, ಗಣ್ಯರಾದ ವೀರಭದ್ರಯ್ಯ, ಪಿ.ಸಿ.ಪುಟ್ಟರುದ್ರಪ್ಪ ಸೇರಿದಂತೆ ಸಮಿತಿಯ ಸದಸ್ಯರು ಭಕ್ತಾದಿಗಳು ಮಂಡಲ ಪೂಜೆಯಲ್ಲಿ ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!