ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಸೋಂಕಿನಿಂದ ಮೃತರಾದ 371 ಕುಟುಂಬದವರಿಗೆ ರೂ.3 ಕೋಟಿ 71 ಲಕ್ಷಗಳ ಪರಿಹಾರ ವಿತರಣೆ

ಬೆಂ.ಗ್ರಾ.ಜಿಲ್ಲೆ: ಜೀವನಕ್ಕಿಂತ ಜೀವ ಮುಖ್ಯವಾಗಿದ್ದು, ಪ್ರತಿಯೊಬ್ಬರ ಜೀವವೂ ಅಮೂಲ್ಯವಾಗಿರುವುದರಿಂದ, ಜಿಲ್ಲೆಯ ಜನತೆ ಕೋವಿಡ್-19 ಲಸಿಕೆಯನ್ನು ಪಡೆದು, ಅಗತ್ಯ ಮುನ್ನಚ್ಚರಿಕಾ ನಿಯಮಗಳನ್ನು ಅನುಸರಿಸುವ ಮೂಲಕ ಸುರಕ್ಷಿತವಾಗಿರಬೇಕೆಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎನ್.ನಾಗರಾಜು(ಎಂ.ಟಿ.ಬಿ) ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಸಭಾಂಗಣದಲ್ಲಿಂದು ನಡೆದ “ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಪರಿಹಾರಧನದ ಚೆಕ್‌ನ್ನು ವಿತರಣಾ ಕಾರ್ಯಕ್ರಮ” ದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್-19 ಸೋಂಕು ಅತಿ ಕಡಿಮೆ ಅವಧಿಯಲ್ಲಿ ವೇಗವಾಗಿ ಪಸರಿಸುವ ಮೂಲಕ, ಜನತೆಗೆ ಆತಂಕ ಸೃಷ್ಟಿಸಿದ್ದು, ಜಿಲ್ಲೆಯ ಜನತೆ ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವ ಮೂಲಕ ಧೈರ್ಯದಿಂದ ಇರಬೇಕು ಎಂದು ಹೇಳಿದರು.

ಕೋವಿಡ್ ಸೋಂಕಿನಿಂದ ಮೃತಪಟ್ಟ ಬಿ.ಪಿ.ಎಲ್. ಕುಟುಂಬಕ್ಕೆ ರಾಜ್ಯ ಸರ್ಕಾರವು ನೀಡುತ್ತಿರುವ ರೂ. 1 ಲಕ್ಷಗಳ ಪರಿಹಾರವನ್ನು, ಎ.ಪಿ.ಎಲ್. ಕುಟುಂಬದವರಿಗೂ ನೀಡಲು ಸರ್ಕಾರಕ್ಕೆ ಮನವಿ ಮಾಡಿ, ಪೂರಕವಾಗಿ ಸ್ಪಂದಿಸುವುದಾಗಿ ತಿಳಿಸಿದರಲ್ಲದೆ, ಆಧಾರ್ ಸಂಖ್ಯೆ, ವಿಳಾಸ, ಮೊಬೈಲ್ ಸಂಖ್ಯೆ ತಪ್ಪಾಗಿ ನೀಡಿರುವ ಮೃತ ಕುಟುಂಬದ ವಾರಸುದಾರರು ಸರಿಯಾದ ಮಾಹಿತಿ ನೀಡಿ, ಪರಿಹಾರ ಪಡೆಯುವಂತೆ ತಿಳಿಸಿದರು.

ದೇಶದಲ್ಲಿ 120 ಕೋಟಿ ಜನತೆಗೆ ಈಗಾಗಲೇ ಲಸಿಕಾಕರಣವಾಗಿದ್ದು, ರಾಜ್ಯದಲ್ಲಿ 5 ಕೋಟಿ ಜನರಿಗೆ ಲಸಿಕೆ ನೀಡುವ ಮೂಲಕ ಶೇ. 94ರಷ್ಟು ಲಸಿಕಾಕರಣ ಯಶಸ್ವಿಗೊಳಿಸಲಾಗಿದೆ ಎಂದು ತಿಳಿಸಿದರು.

ಕೋವಿಡ್-19 ಎರಡನೇ ಅಲೆಯ ಸಂದರ್ಭದಲ್ಲಿ ಸೋಂಕಿತರಿಗೆ ಆಸ್ಪತ್ರೆ, ಐಸಿಯು, ವೆಂಟಿಲೇಟರ್, ಆಕ್ಸಿಜನ್, ರೆಮ್ಡಿಸಿವಿರ್ ಇಂಜೆಕ್ಷನ್‌ಗಳ ಕೊರತೆಯ ಸಂದರ್ಭದಲ್ಲೂ, ಪೂರೈಕೆಗಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಕೈಗೊಂಡ ಕಾರ್ಯಗಳು ಸ್ಮರಣೀಯ ಎಂದು ಹೇಳಿದರು.

ಅತಿವೃಷ್ಟಿಯಿಂದ ಉಂಟಾದ  ಮಳೆ ಹಾನಿ ಕುರಿತಂತೆ ಈಗಾಗಲೇ 2 ಕೋಟಿ 53 ಲಕ್ಷಗಳ ಪರಿಹಾರ ಬಿಡುಗಡೆಯಾಗಿದೆ ಎಂದು ತಿಳಿಸಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನತೆ ಕೋವಿಡ್ ಸೋಂಕಿನಿಂದ ಈಗಾಗಲೇ ಸಾಕಷ್ಟು ಬಳಲಿದ್ದು, ಕೋವಿಡ್-19 ಸೋಂಕಿನಿಂದ ಮೃತರಾದ ಕುಟುಂಬದ ವಾರಸುದಾರರಿಗೆ ಮಾನವೀಯ ದೃಷ್ಟಿಯಿಂದ ಈ ಪರಿಹಾರ ನೀಡಲಾಗುತ್ತಿದೆ ಎಂದರಲ್ಲದೆ, ಕೇಂದ್ರ ಸರ್ಕಾರದ ಮಾದರಿಯಲ್ಲಿಯೇ ರಾಜ್ಯ ಸರ್ಕಾರವು ಬಿ.ಪಿ.ಎಲ್.  ಕುಟುಂಬದವರಿಗೆ ನೀಡುತ್ತಿರುವ ಪರಿಹಾರದಂತೆಯೇ, ಮೃತ ವ್ಯಕ್ತಿಯ ಎ.ಪಿ.ಎಲ್. ಕುಟುಂಬದ ವಾರಸುದಾರರಿಗೂ ಪರಿಹಾರ ನೀಡಲು ಸಚಿವರಿಗೆ ಮನವಿ ಮಾಡಿದರು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್. ಅವರು ಮಾತನಾಡಿ, ಯಾವುದೇ ಮುನ್ಸೂಚನೆ ಇಲ್ಲದೆ, ದಿಢೀರ್ ಎಂದು ದೇಹವನ್ನು ಪ್ರವೇಶಿಸುವ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದ್ದು, ಮೃತ ವ್ಯಕ್ತಿಯ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದರಲ್ಲದೆ, ಕೋವಿಡ್‌ನ ರೂಪಾಂತರಿ ತಳಿ ಒಮಿಕ್ರಾನ್ ಕುರಿತು ಮುನ್ನೆಚ್ಚರಿಕೆ ವಹಿಸಿ ಎಂದು ತಿಳಿಸಿದರು.

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್‌ಕುಮಾರ್ ಬಚ್ಚೇಗೌಡ ಅವರು ಮಾತನಾಡಿ, ಕೋವಿಡ್-19 ಸೋಂಕಿನಿಂದ ಹೊಸಕೋಟೆ ವ್ಯಾಪ್ತಿಯಲ್ಲಿ ಸುಮಾರು 400 ಜನರು ಮೃತರಾಗಿದ್ದು, ಕೋವಿಡ್-19 ದುರ್ಬಲ ವರ್ಗದವರ ಮೇಲೆಯೇ ಹೆಚ್ಚು ತೀವ್ರತೆ ತೋರಿದ್ದು ವಿಷಾದನೀಯ ಸಂಗತಿ ಎಂದರಲ್ಲದೆ, ಕರೊನಾ ವಾರಿಯರ್ಸ್‌ಗಳ ಸೇವೆಯನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಕೋವಿಡ್-19ರ ಸೋಂಕಿನಿಂದ ಮೃತರಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 371 ಕುಟುಂಬದವರಿಗೆ ರೂ. 3 ಕೋಟಿ 71 ಲಕ್ಷಗಳ ಪರಿಹಾರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ದೇವನಹಳ್ಳಿ ಪುರಸಭೆ ಅಧ್ಯಕ್ಷೆ ರೇಖಾ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇವಣ್ಣಪ್ಪ, ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಎನ್.ಎಸ್.ಮಹೇಶ್, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್, ತಹಶೀಲ್ದಾರ್‌ಗಳು, ಜಿಲ್ಲಾ ಮಟ್ಟ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಕೋವಿಡ್-19‌ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದ ವಾರಸುದಾರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!