ಬೆಂ.ಗ್ರಾ.ಜಿಲ್ಲೆ: ದೊಡ್ಡಬಳ್ಳಾಪುರ ತಾಲೂಕಿನ ಐತಿಹಾಸಿಕ ಸ್ಥಳಗಳಲ್ಲಿ ಪ್ರಮುಖವಾದ ಘಾಟಿ ಸುಬ್ರಮಣ್ಯಸ್ವಾಮಿ ದೇವಾಲಯದ ಬಳಿ ನಡೆಯುವ ಪ್ರಖ್ಯಾತ ಘಾಟಿ ದನಗಳ ಜಾತ್ರೆ ಜನವರಿ 04 ರಿಂದ ಜ.14 ರವರೆಗೆ 10 ದಿನಗಳ ಕಾಲ ನಡೆಸಲು ಸಿದ್ದತೆ ನಡೆಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ನೇತೃತ್ವದಲ್ಲಿ ಜಾತ್ರಾ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಕೋವಿಡ್ ನಿಯಮ ಪಾಲಿಸಿ ಜ.08 ರಂದು ರಥೋತ್ಸವ ನಡೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೋವಿಡ್ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಅವಕಾಶ, ರಾಸುಗಳಿಗೆ ಕಾಲುಬಾಯಿ ರೋಗದ ಲಸಿಕೆ ಹಾಸಿರುವುದು ಖಾತ್ರಿ ಪಡಿಸಿಕೊಂಡು ಜಾತ್ರೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವುದು.
ರಾಸುಗಳಿಗೆ ನೀರಿನ ಸರಬರಾಜು, ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕುರಿತು ಚರ್ಚೆ ನಡೆಸಲಾಗಿದೆ.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ ಇ.ರವಿಕುಮಾರ್, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ಜಿಲ್ಲಾ ಮುಜರಾಯಿ ಸಹಾಯಕ ಆಯುಕ್ತ ಎನ್.ನಾರಾಯಣಸ್ವಾಮಿ, ಮುಜರಾಯಿ ತಹಶೀಲ್ದಾರ್ ಹೇಮಾವತಿ, ಘಾಟಿ ದೇವಾಲಯದ ಇಒ ಎನ್.ಕೃಷ್ಣಪ್ಪ ಮತ್ತಿತರರಿದ್ದರು ಎಂದು ಉನ್ನತ ಮೂಲಗಳು ಹರಿತಲೇಖನಿಗೆ ತಿಳಿಸಿವೆ.(ಸಂಗ್ರಹ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….