ಶುದ್ಧ ಗಾಳಿ ಹೊಂದಿರುವ ನಗರಗಳಲ್ಲಿ ಚಿಕ್ಕಬಳ್ಳಾಪುರ ನಗರ ರಾಷ್ಟ್ರದಲ್ಲಿಯೇ 4ನೇ ಸ್ಥಾನ..!

ಚಿಕ್ಕಬಳ್ಳಾಪುರ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಬಿಡುಗಡೆ ಮಾಡಿರುವ ವಾಯು ಮಾಲಿನ್ಯ ಅತ್ಯಲ್ಪ ಪ್ರಮಾಣದಲ್ಲಿರುವ ಹಾಗೂ  ಶುದ್ಧ ಗಾಳಿ ಹೊಂದಿರುವ  ಟಾಪ್ ಟೆನ್ ನಗರಗಳ ಪಟ್ಟಿಯಲ್ಲಿ ರಾಷ್ಟ್ರದಲ್ಲಿಯೇ ಚಿಕ್ಕಬಳ್ಳಾಪುರ ನಗರ ನಾಲ್ಕನೇ ಸ್ಥಾನವನ್ನು ಗಳಿಸಿದೆ ಎಂದು  ಚಿಕ್ಕಬಳ್ಳಾಪುರ ಜಿಲ್ಲಾ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ. 

ಅವರು ಭಾನುವಾರ ಈ ಕುರಿತು ಮಾಧ್ಯಮಗಳಿಗೆ ವಿವರನ್ನು  ಬಿಡುಗಡೆ ಮಾಡಿ ಮಾತನಾಡುತ್ತಾ, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ದೇಶದ ವಿವಿಧ ನಗರಗಳಲ್ಲಿನ  “ಪರಿವೇಷ್ಟಕ ವಾಯು ಗುಣಮಟ್ಟ ಮಾಪನ ಕೇಂದ್ರ”ಗಳಲ್ಲಿ ದಾಖಲಾಗುವ ಧೂಳಿನ ಕಣಗಳ ಸಾಂದ್ರತೆ ಹಾಗೂ ಇತರ ಅಂಕಿ-ಅಂಶಗಳನ್ನು ಆಧರಿಸಿ ದೇಶದ ಎಲ್ಲಾ ನಗರಗಳಲ್ಲಿನ ಶುದ್ಧ ಗಾಳಿಯ ಗುಣಮಟ್ಟದ ಪ್ರಮಾಣವನ್ನು  ಆಗಿಂದಾಗ್ಗೆ ನಿಯಮಿತವಾಗಿ  ಸಮೀಕ್ಷೆ ಮಾಡಿ ವರದಿಯನ್ನು ಪ್ರಕಟಿಸುತ್ತಿರುತ್ತದೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಚಿಕ್ಕಬಳ್ಳಾಪುರ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ  ಪರಿವೇಷ್ಟಕ ವಾಯು ಗುಣಮಟ್ಟ ಮಾಪನ ಕೇಂದ್ರವನ್ನು ಸ್ಥಾಪಿಸಿರುತ್ತದೆ. ಈ ಮಾಪನ ಕೇಂದ್ರದ ಮಾಹಿತಿಯನ್ನು ಒಳಗೊಂಡಂತೆ ದೇಶದ ಎಲ್ಲಾ ನಗರಗಳಲ್ಲಿನ ಮಾಪನ ಕೇಂದ್ರಗಳ ಕಳೆದ ನವೆಂಬರ್ 24ರ  ವರೆಗಿನ ಮಾಹಿತಿಯನ್ನು ವಿಶ್ಲೇಷಿಸಿ 2021- 22ನೇ ಸಾಲಿಗೆ ಸಂಬಂಧಿಸಿದಂತೆ  ಪ್ರಸ್ತುತ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ  ಪ್ರಕಟಿಸಿರುವ ಪಟ್ಟಿಯಲ್ಲಿ   ಚಿಕ್ಕಬಳ್ಳಾಪುರ ನಗರ  ರಾಷ್ಟ್ರದಲ್ಲಿಯೇ ನಾಲ್ಕನೇ  ಸ್ಥಾನವನ್ನು ಗಳಿಸಿದೆ .ಈ ಪಟ್ಟಿಯಲ್ಲಿ  ಕರ್ನಾಟಕ ರಾಜ್ಯದ  7ನಗರಗಳು ಸ್ಥಾನ ಗಿಟ್ಟಿಸಿ ಕೊಂಡಿರುವುದು ಸಂತಸದ ಸಂಗತಿಯಾಗಿದೆ ಎಂದರು.

2020- 21ನೇ ಸಾಲಿನಲ್ಲಿ ಶುದ್ಧ ಗಾಳಿಯ ಗುಣಮಟ್ಟದ ಪಟ್ಟಿಯಲ್ಲಿ   ಚಿಕ್ಕಬಳ್ಳಾಪುರ ನಗರ  7ನೇ ಸ್ಥಾನದಲ್ಲಿತ್ತು  ಈ ವರ್ಷ 4ನೇ ಸ್ಥಾನಕ್ಕೆ ಜಿಗಿದಿದೆ. 2019-20 ನೇ ಸಾಲಿನಿಂದ ಜಿಲ್ಲಾಡಳಿತ ಕೈಗೊಂಡಿರುವ ಕೆಲವು ಸಕಾರಾತ್ಮಕ ಕ್ರಮಗಳಿಂದ ಈ ಸ್ಥಾನಗಳನ್ನು ಗಳಿಸಲು ಸಾಧ್ಯವಾಗಿದೆ. ಶಾಲಾ ಕಾಲೇಜುಗಳು, ಅಂಗನವಾಡಿ ಕೇಂದ್ರಗಳು, ರಸ್ತೆಗಳ ಇಕ್ಕೆಲಗಳು, ಗೋಮಾಳ ಗುಣಿತೋಪು ಸೇರಿದಂತೆ ಸರ್ಕಾರಿ ಜಮೀನುಗಳಲ್ಲಿ 2019-20 ನೇ ಸಾಲಿನಲ್ಲಿ ದಾಖಲೆಯ ಪ್ರಮಾಣದಲ್ಲಿ 6 ಲಕ್ಷಕ್ಕೂ ಅಧಿಕ ಗಿಡಮರಗಳನ್ನು ನೆಟ್ಟು ಬೆಳೆಸಿ ಹಸಿರೀಕರಣಗೊಳಿಸಿದ್ದು ಜೊತೆಗೆ ನಗರಸಭೆಯಿಂದ ಘನ ತ್ಯಾಜ್ಯವನ್ನು ಹಸಿ ಮತ್ತು ಒಣ ಕಸವನ್ನು  ಮನೆಯಿಂದಲೇ ಪ್ರತ್ಯೇಕಿಸಿ ಸೂಕ್ತ ರೀತಿಯಲ್ಲಿ ಸಂಗ್ರಹಿಸಿ ವೈಜ್ಙಾನಿಕವಾಗಿ ವಿಲೇವಾರಿ ಮಾಡಿದ್ದು ಹಾಗೂ ಬೇಸಿಗೆ ಕಾಲದಲ್ಲಿ ನಗರದ ರಸ್ತೆಗಳಿಗೆ ನೀರು ಸಿಂಪಡಿಸುವ ಮೂಲಕ  ಧೂಳಿನ ಕಣಗಳನ್ನು ತಡೆಗಟ್ಟಿದ್ದು ಸಹ ಈ ಸಾಧನೆಗೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಸಕಲ ರೀತಿಯಲ್ಲಿ ಮಾರ್ಗದರ್ಶನ ಹಾಗೂ ಸಹಕಾರ ನೀಡಿದ ಜಿಲ್ಲಾಧಿಕಾರಿ ಆರ್.ಲತಾ ಅವರಿಗೆ ಹಾಗೂ ಜಿಲ್ಲಾಡಳಿತದ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ  ಧನ್ಯವಾದಗಳನ್ನು ತಿಳಿಸಿದರು. 

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಬಿಡುಗಡೆ ಮಾಡಿರುವ ವಾಯು ಮಾಲಿನ್ಯ  ಪ್ರಮಾಣ ಅತ್ಯಂತ ಕಡಿಮೆ ಇರುವ ಹಾಗೂ  ಶುದ್ಧ ಗಾಳಿ ಹೊಂದಿರುವ ನಗರಗಳ ಪೈಕಿ ಗದಗ ನಗರ ಮೊದಲನೇ ಸ್ಥಾನ, ಮಡಿಕೇರಿ ಎರಡನೇ ಸ್ಥಾನ , ಚಿಕ್ಕಬಳ್ಳಾಪುರ ನಾಲ್ಕನೇ ಸ್ಥಾನ, ಹಾಸನ ಐದನೇ ಸ್ಥಾನ ಮತ್ತು ಚಾಮರಾಜನಗರ, ಚಿಕ್ಕಮಗಳೂರು ಯಾದಗಿರಿ ನಗರಗಳು ಕ್ರಮವಾಗಿ 7,8 ಮತ್ತು 9ನೇ ಸ್ಥಾನಗಳನ್ನು ಗಿಟ್ಟಿಸಿಕೊಂಡಿವೆ .ಈ 7 ನಗರಗಳ  ಪೈಕಿ  ರಾಜಧಾನಿ ಬೆಂಗಳೂರಿಗೆ ಅತೀ ಸಮೀಪದಲ್ಲಿರುವ ಚಿಕ್ಕಬಳ್ಳಾಪುರ ನಗರ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ. 

ಪ್ರತಿಕ್ರಿಯೆ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಬಿಡುಗಡೆ ಮಾಡಿರುವ “ವಾಯು ಮಾಲಿನ್ಯ ಕಡಿಮೆ ಪ್ರಮಾಣದಲ್ಲಿರುವ ಹಾಗೂ ಶುದ್ಧ ಗಾಳಿ ಹೊಂದಿರುವ  ಟಾಪ್ ಟೆನ್ ನಗರಗಳ ಪಟ್ಟಿಯಲ್ಲಿ   ರಾಷ್ಟ್ರದಲ್ಲಿಯೇ ಚಿಕ್ಕಬಳ್ಳಾಪುರ ನಗರ ನಾಲ್ಕನೇ ಸ್ಥಾನವನ್ನು ಗಳಿಸಿರುವುದು ಹರ್ಷದಾಯಕವಾದ ವಿಚಾರವಾಗಿದೆ ” ಈ ಸಾಧನೆಗೈಯಲು ಸಹಕಾರ ನೀಡಿದ ಜಿಲ್ಲೆಯ ಸಮಸ್ತ ನಾಗರಿಕರಿಗೆ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಭಿನಂದನೆಗಳು.

ಈ ವರ್ಷ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿರುವುದರಿಂದ ಹೆಚ್ಚು ಮರ ಗಿಡಗಳನ್ನು ಬೆಳೆಸಲು ವಾತಾವರಣ ಪೂರಕವಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ  ಜಿಲ್ಲೆಯಾದ್ಯಂತ ಇನ್ನಷ್ಟು ಹಸಿರೀಕರಣ ಕಾರ್ಯಗಳನ್ನು ಕೈಗೊಂಡು  ಗುಣಮಟ್ಟದ ಶುದ್ಧ ಗಾಳಿಯನ್ನು ಹೊಂದಿರುವ  ನಗರಗಳ ಪಟ್ಟಿಯಲ್ಲಿ  ಚಿಕ್ಕಬಳ್ಳಾಪುರ ನಗರ ಮೊದಲ ಸ್ಥಾನ ಗಳಿಸಬೇಕು  ಹಾಗೂ ಜಿಲ್ಲೆಯ ಇತರ ನಗರಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆಯುವಂತಾಗಬೇಕು  ಆ ನಿಟ್ಟಿನಲ್ಲಿ  ನಗರ ಸ್ಥಳೀಯಾಡಳಿತ ಸಂಸ್ಥೆಗಳ ಅಧಿಕಾರಿಗಳು,ಅರಣ್ಯ ಹಾಗೂ ಪರಿಸರ ಇಲಾಖೆಯ ಅಧಿಕಾರಿಗಳು  ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಪ್ರತಿಕ್ರಿಯೆ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!