ಎಲ್ಲಾ ಸಮುದಾಯಗಳ ಭಾವನೆಗೆ ಸ್ಪಂದಿಸುವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾವೇರಿ: ನಿಮ್ಮ ಪ್ರೀತಿ ವಿಶ್ವಾಸದ ಮುಂದೆ ಯಾವುದು ದೊಡ್ಡದಲ್ಲ. ಎಲ್ಲಾ ಸಮುದಾಯಗಳ ಭಾವನೆಗೆ ಸರ್ಕಾರ ಸದಾ ಸ್ಪಂದಿಸುತ್ತದೆ. ನಿಮ್ಮ ಬೆಂಬಲಕ್ಕೆ ಶ್ರೇಯಸ್ಸು ತರುವ ಕೆಲಸ ಮಾಡುತ್ತೇನೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಶಿಗ್ಗಾಂವ ತಾಲೂಕಿನ ಸಂತೆ ಮೈದಾನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಅನಾವರಣ ಮಾಡಿ ಮಾತನಾಡಿದ ಅವರು, ಈ ಕ್ಷೇತ್ರದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಯಾವುದೇ ಭೇದವಿಲ್ಲದೇ  ಕ್ಷೇತ್ರದ ಎಲ್ಲರೂ ಒಗ್ಗಟ್ಟಾಗಿ ಕೆಲಸ ನಿರ್ವಹಿಸಬೇಕು. ನೊಂದ, ತುಳಿತಕ್ಕೆ ಒಳಪಟ್ಟ ಜನರ ರಕ್ಷಣೆಗೆ ಸರ್ಕಾರ ಸದಾ ಸಿದ್ಧವಾಗಿರುತ್ತದೆ ಎಂದರು.

ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ವಿಸ್ತರಣೆಗಾಗಿ ಹೋರಾಟ ಮಾಡಿದವಳು ಅಲ್ಲ, ತನ್ನ ರಾಜ್ಯದ ಜನರಿಗಾಗಿ ಹೋರಾಟ ಮಾಡಿದಳು. ಆ ಹೋರಾಟದಲ್ಲಿ ಪ್ರತಿ ನಾಗರಿಕರು ಸೈನಿಕರಂತೆ ಹೋರಾಟ ಮಾಡಿದರು. ಅವರ ಹೋರಾಟ ನಮಗೆ ಸ್ಫೂರ್ತಿದಾಯಕವಾಗಬೇಕು. ಪ್ರತಿಯೊಬ್ಬರು ಒಗ್ಗಟ್ಟಾಗಿ ಕೆಲಸ ನಿರ್ವಹಿಸಬೇಕು ಎಂದರು.

ಶಿಗ್ಗಾಂವ್ ಹಾಗೂ ಸವಣೂರು ದಾರ್ಶನಿಕರ ಬೀಡು. ಅವರ ಆದರ್ಶ, ಚಿಂತನೆಗಳ ಬೇರು ಈ ನಾಡಿನಲ್ಲಿದೆ. ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಎಲ್ಲರೂ ಒಂದುಗೂಡಿ ಕೆಲಸ ಮಾಡಿದರೆ ಯಶಸ್ಸು ಸಿಗುತ್ತದೆ ಎಂದರು. ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಅಲ್ಲದೇ ಮುಂದಿನ ದಿನಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿ ಅನಾವರಣ ಮಾಡಲಾಗುವುದು ಎಂದು ಭರವಸೆ ನೀಡಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರಗೇಶ ನಿರಾಣಿ ಅವರು ಮಾತನಾಡಿ, ಮುಖ್ಯಮಂತ್ರಿಗಳು ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಜನವರಿ 14ರಂದು ಹರಿಹರದಲ್ಲಿ ನೂತನವಾದ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಸಮುದಾಯದ ಪದವೀಧರರು ಭಾಗವಹಿಸುವ ಮೂಲಕ ಸದುಪಯೋಗ ಪಡಿಸಿಕೊಳ್ಳಿ ಎಂದು ತಿಳಿಸಿದರು.

ಪೆಟ್ರೋಲ್, ಡಿಸೇಲ್‍ಗೆ ಪರ್ಯಾಯವಾಗಿ ಆತ್ಮ ನಿರ್ಭರ ಯೋಜನೆಯಡಿ ಏಷ್ಯಾ ಖಂಡದಲ್ಲಿಯೇ ಅತಿಹೆಚ್ಚು ಎಥೆನಾಲ್ ಉತ್ಪಾದನೆ ಮಾಡುವ ಘಟಕವನ್ನು ಸ್ಥಾಪಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ಬಸವನಗೌಡ ಪಾಟೀಲ ಯತ್ನಾಳ್, ಅರುಣಕುಮಾರ ಪೂಜಾರ, ವಿಧಾನ ಪರಿಷತ್ತ ಸದಸ್ಯ ಸೋಮಣ್ಣ ಬೇವಿನಮರ, ಮಾಜಿ ಸಂಸದ ಮಂಜುನಾಥ ಕುನ್ನುರು, ಮಾಜಿ ಸಚಿವ ವಿನಯ ಕುಲಕರ್ಣಿ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]