ಡಿಸಿ, ಎಸ್‍ಪಿ, ಸಿಇಒ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಬೈಕ್ ರ್ಯಾಲಿ…!

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳು, ಅಲ್ಲದೆ ಸಾಮಾಜಿಕ ಪಿಡುಗುಗಳ ಕುರಿತು ಜನ ಜಾಗೃತಿ, ಸಂಚಾರ ನಿಯಮಗಳು ಹಾಗೂ ಕೋವಿಡ್ ನಿಯಂತ್ರಣ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿ.ಪಂ. ಸಿಇಒ ಡಾ. ವಿಜಯ ಮಹಾಂತೇಶ್, ಎಸ್‍ಪಿ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ದಾವಣಗೆರೆಯಿಂದ, ಸಂತೆಬೆನ್ನೂರು ಮಾರ್ಗವಾಗಿ, ಸೂಳೆಕೆರೆ ವರೆಗೆ ಬೈಕ್ ರ್ಯಾಲಿ ಯನ್ನು ಹಮ್ಮಿಕೊಳ್ಳಲಾಯಿತು.

ದಾವಣಗೆರೆ ನಗರದ ಹೊರವಲಯದಲ್ಲಿರುವ ಜಿಲ್ಲಾ ಪಂಚಾಯತ್ ಆವರಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ನೇತೃತ್ವದ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ತಮ್ಮ ತಮ್ಮ ಬುಲೆಟ್ ಬೈಕ್‍ನೊಂದಿಗೆ ರ್ಯಾಲಿ ಹೊರಡಲು ಉತ್ಸಾಹ, ಹುರುಪಿನೊಂದಿಗೆ ಸಿದ್ಧರಾಗಿ ಬಂದಿದ್ದರು.

ಜಿಲ್ಲಾಧಿಕಾರಿಗಳು ತಮ್ಮ ಬೈಕ್‍ಗೆ ‘ಕೋವಿಡ್ ನಿಯಂತ್ರಣ ಕುರಿತು, ತಪ್ಪದೆ ಲಸಿಕೆ ಪಡೆಯುವಂತೆ ಕೋರುವ ಸಂದೇಶವುಳ್ಳ ಫಲಕವನ್ನು ಅಳವಡಿಸಿಕೊಂಡರೆ, ಎಸ್‍ಪಿ ಸಿ.ಬಿ. ರಿಷ್ಯಂತ್ ಅವರು ಅಪರಾಧ ತಡೆ ಮಾಸಾಚರಣೆ ನಿಮಿತ್ಯ, ‘ಹೆಲ್ಮೆಟ್ ಬಳಸಿ ಚಾಲನೆ ಮಾಡಿ’, ಅಪರಾಧ ಮುಕ್ತ ಸಮಾಜ ನಿರ್ಮಿಸೋಣ ಬನ್ನಿ’ ಎಂಬ ಸಂದೇಶವುಳ್ಳ ಫಲಕ.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಅವರು ‘ಮಕ್ಕಳ ಸಹಾಯವಾಣೀ 1098’ ಕುರಿತು, ಜಿ.ಪಂ. ಸಿಇಒ ಡಾ. ವಿಜಯ ಮಹಾಂತೇಶ್ ಅವರು, ಬಾಲ ಕಾರ್ಮಿಕ ಪದ್ದತಿ ವಿರೋಧದ ಬಗೆಗಿನ ಸಂದೇಶವುಳ್ಳ ಫಲಕ, ಆರ್‍ಟಿಒ ಶ್ರೀಧರ್ ಮಲ್ಲಾಡ್ ಅವರು ಕೂಡ ರಸ್ತೆ ಸುರಕ್ಷತೆ ಸಪ್ತಾಹ ಕುರಿತು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಗಂಗಪ್ಪ ಅವರು ಕೋವಿಡ್ ನಿಯಂತ್ರಣ ಕುರಿತ ಜಾಗೃತಿ ಫಲಕಗಳನ್ನು ತಮ್ಮ ಬೈಕ್‍ಗೆ ಅಳವಡಿಸಿಕೊಂಡಿದ್ದರು.

ಜಿಲ್ಲಾ ಪಂಚಾಯತ್ ಆವರಣದಿಂದ ಆವರಣದಿಂದ ಹೊರಟ ಅಧಿಕಾರಿಗಳ ಬೈಕ್ ರ್ಯಾಲಿ, ಶಿಸ್ತಿನಿಂದ, ರಸ್ತೆಯ ಒಂದೆ ಬದಿಯಲ್ಲಿ ಮಿತಿಯಾದ ವೇಗದೊಂದಿಗೆ ಸಾಗಿತು.  ಸಂತೆಬೆನ್ನೂರಿಗೆ ಆಗಮಿಸಿ, ಇಲ್ಲಿನ ಐತಿಹಾಸಿಕ ಪುಷ್ಕರಣಿಗೆ ಭೇಟಿ ನೀಡಿತು. ಬೈಕ್ ರ್ಯಾಲಿ ಸಾಗುತ್ತಿದ್ದ ದಾರಿಯಲ್ಲಿನ ಗ್ರಾಮಗಳಲ್ಲಿ ಸಾರ್ವಜನಿಕರು, ಇಕ್ಕೆಲಗಳಲ್ಲಿ ನಿಂತು, ಬೈಕ್ ರ್ಯಾಲಿಯನ್ನು ಅಚ್ಚರಿ ಹಾಗೂ ಕುತೂಹಲದಿಂದ ವೀಕ್ಷಿಸಿದ್ದು ಕಂಡುಬಂದಿತು.  ಸಂತೆಬೆನ್ನೂರಿನ ಪುಷ್ಕರಣಿ ವೀಕ್ಷಿಸಲು ಆಗಮಿಸಿದ್ದ ಸಾರ್ವಜನಿಕರಲ್ಲೂ ಕೂಡ ಜನಜಾಗೃತಿಯನ್ನು ಇದೇ ಸಂದರ್ಭದಲ್ಲಿ ಅಧಿಕಾರಿಗಳ ತಂಡ ಮೂಡಿಸುವಲ್ಲಿ ಯಶಸ್ವಿಯಾಯಿತು.  ಬೈಕ್ ರ್ಯಾಲಿಯು ಸೂಳೆಕೆರೆ ಬಳಿಯ ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನಕ್ಕೆ ತೆರಳಿ, ದೇವರ ದರ್ಶನ ಮಾಡುವ ಮೂಲಕ ಜಾಥಾ ಪೂರ್ಣಗೊಳಿಸಿತು.

ಕಚೇರಿಗಳಲ್ಲಿ ಕುಳಿತು ಸಾರ್ವಜನಿಕರೊಂದಿಗೆ ಸಮಸ್ಯೆಗಳನ್ನು ಆಲಿಸಿ, ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡುವುದು, ಸಮಸ್ಯೆಗಳ ಪರಿಹಾರಕ್ಕೆ ಕಡತಗಳ ನಡುವೆ ಕುಳಿತು ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳಿಗೆ, ಭಾನುವಾರದಂದು ಏರ್ಪಡಿಸಿದ ವಿಶೇಷ ಬೈಕ್ ರ್ಯಾಲಿ, ಕಚೇರಿಯಿಂದ ಹೊರಬಂದು, ಬೈಕ್ ಮೂಲಕ ರಸ್ತೆಯಲ್ಲಿ ಸಾಗುತ್ತಾ ಜನರೊಂದಿಗೆ ಬೆರೆಯುವ ಅವಕಾಶ ಕಲ್ಪಿಸಿತಲ್ಲದೆ, ಸಾರ್ವಜನಿಕ ಜೀವನದ ಮತ್ತೊಂದು ಮಜಲನ್ನು ಪರಿಚಯಿಸುವಂತೆ ಮಾಡಿತು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ ನಾಯಕ್,  ಜಂಟಿಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಆರ್‍ಟಿಒ ಶೀಧರ್ ಮಲ್ಲಾಡ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!