ಬೆಳಗಾವಿ: ಪ್ರತಿಪಕ್ಷ ಕಾಂಗ್ರೆಸ್ ವಿರೋಧದ ಮಧ್ಯೆಯೇ ಮತಾಂತರ ನಿಷೇಧ ವಿಧೇಯಕವನ್ನು ಸರಕಾರ ವಿಧಾನಸಭೆಯಲ್ಲಿ ಮಂಡಿಸಿದ್ದು, ಇದನ್ನು ವಿರೋಧಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ವಿರೋಧಿಸಿ ಸಭಾತ್ಯಾಗ ಮಾಡಿದರೆ. ಸರಕಾರದ ಈ ಕ್ರಮವನ್ನು ರಾಜ್ಯ ಬಿಜೆಪಿ ಸಮರ್ಥಿಸಿಕೊಂಡಿದೆ.
ಭೋಜನ ವಿರಾಮದ ನಂತರ ಕಲಾಪ ಆರಂಭವಾಗುತ್ತಿದ್ದಂತೆ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕ ಮಂಡಿಸಿದರು.
ಮತಾಂತರ ಆಗಬೇಕಾದಲ್ಲಿ ಪಾಲಿಸಬೇಕಿದೆ ನಿಯಮಾವಳಿಗಳು: ಮತಾಂತರವಾಗಲು ಮುಂದಾಗಿರುವ ವ್ಯಕ್ತಿ ಕನಿಷ್ಠ ಆರವತ್ತು ದಿನಗಳ ಮೊದಲು ಜಿಲ್ಲಾ ದಂಡಾಧಿಕಾರಿಗೆ ಈ ಬಗ್ಗೆ ತಿಳಿಸಬೇಕು.ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆ ಜಿಲ್ಲಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಈ ಬಗ್ಗೆ ಮಾಹಿತಿ ಕೊಡಬೇಕು.
ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆ30 ದಿನಗಳ ಒಳಗಾಗಿ ಆಕ್ಷೇಪನೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಲು ಅವಕಾಶ ಇದೆ. ವಿಚಾರಣೆಯ ಸಂದರ್ಭದಲ್ಲಿ ತಪ್ಪು ಕಂಡುಬಂದಲ್ಲಿ ಕ್ರಿಮಿನಲ್ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.
ಮತಾಂತರಗೊಂಡ ವ್ಯಕ್ತಿಯೂ ಮತಾಂತರಗೊಂಡ ದಿನಾಂಕದಿಂದ ಹಿಡಿದು ಮೂಲ ಧರ್ಮ, ಮತಾಂತರಗೊಂಡ ಧರ್ಮ ಹಾಗೂ ಇನ್ನಿತರ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಬೇಕು.ಅಪರಾಧಕ್ಕೆ ನೆರವು ಹಾಗೂ ದುಷ್ಪ್ರೇರಣೆ ನೀಡಿ ವ್ಯಕ್ತಿಯನ್ನು ಆರೋಪಿಯನ್ನಾಗಿ ಪರಿಗಣಿಸುವ ಅವಕಾಶವೂ ಇದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….