ದಿನ ಭವಿಷ್ಯ: ಮಂಗಳವಾರ, ಡಿಸೆಂಬರ್ 21, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರು ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ

ಮೇಷ: ಈ ರಾಶಿಯವರಿಗೆ ಹಿತಶತೃಗಳ ಸಲಹೆಯಿಂದ ತೊಂದರೆ. ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

ವೃಷಭ: ಈ ರಾಶಿಯವರ  ಪಾಲುದಾರಿಕೆಯಿಂದ ಲಾಭ ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವುದು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ.

ಮಿಥುನ: ಈ ರಾಶಿಯವರ ಚತುರತೆಯಿಂದ ಜಯ, ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವುದು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವುದು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ.

ಕಟಕ: ಈ ರಾಶಿಯವರಿಗೆ ಖರ್ಚು ಜಾಸ್ತಿ, ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ.

ಸಿಂಹ: ಈ ರಾಶಿಯವರು ಗುರುವಿನ ಅನುಗ್ರಹದಿಂದ ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವುದು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು.

ಕನ್ಯಾ: ಈ  ರಾಶಿಯವರು ಅಪರಿಚಿತರ ಸಹಾಯದಿಂದ ಶುಭಫಲ ಕಂಡುಬರುವುದು. ನೌಕರರ ತೊಂದರೆಗಳು ನಿವಾರಣೆಯಾಗುವುದು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವುದು. ಕೊಟ್ಟಸಾಲ ಪಾವತಿಯಾಗುವುದು.

ತುಲಾ: ಈ ರಾಶಿಯವರಿಗೆ ಗುರುವಿನ ಅನುಗ್ರಹವಿದೆ, ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ.

ವೃಶ್ಚಿಕ: ಈ ರಾಶಿಯವರಿಗೆ ಸ್ವಲ್ಪ ಹಿನ್ನಡೆ. ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು.

ಧನಸ್ಸು: ಈ ರಾಶಿಯವರಿಗೆ ಉತ್ತಮ ಅವಕಾಶಗಳು, ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಕೋರ್ಟ್ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು.

ಮಕರ: ಈ ರಾಶಿಯವರಿಗೆ ಗಾಬರಿ, ಆತುರ ಬೇಡ. ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆಯಾಗುವುದು.

ಕುಂಭ: ಈ ರಾಶಿಯವರಿಗೆ ಆಕಸ್ಮಿಕ ಅದೃಷ್ಟ. ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು.

ಮೀನ: ಈ ರಾಶಿಯವರಿಗೆ ಹಿತ ಶತೃಗಳ ದೃಷ್ಟಿ, ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು.

ತಿಥಿ: ದ್ವಿತೀಯ 

ನಕ್ಷತ್ರ: ಪುನರ್ವಸು ನಕ್ಷತ್ರ

 ರಾಹುಕಾಲ: 03:13  ರಿಂದ 04:39

ಗುಳಿಕಕಾಲ: 12:22  ರಿಂದ 01:47

ಯಮಗಂಡಕಾಲ: 09:30 ರಿಂದ 10:56 

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!