ಡಿ.31ರಂದು ಕರ್ನಾಟಕ ಬಂದ್: ಎಂಇಎಸ್ ಸಂಘಟನೆ ನಿಷೇಧಕ್ಕೆ ಕನ್ನಡಪರ ಸಂಘಟನೆಗಳ ಆಗ್ರಹ / ಸರ್ಕಾರಕ್ಕೆ ಡಿ.29ರವರೆಗೆ ಗಡುವು

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಕನ್ನಡಿಗರು, ಕನ್ನಡ ನಾಡಿನ ಆಸ್ತಿಪಾಸ್ತಿ ಮೇಲೆ ಎಂಇಎಸ್ ದಬ್ಬಾಳಿಕೆ ಹಾಗೂ ಖಂಡಿಸಿ, ಸಂಘಟನೆಯನ್ನು ಕರ್ನಾಟಕದಲ್ಲಿ ನಿಷೇಧ ಮಾಡಬೇಕೆಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಹೊಸ ವರ್ಷ ಮುನ್ನಾದಿನ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್: ಕರ್ನಾಟಕ, ಕನ್ನಡ ನಾಡು ನುಡಿಯ ಒಗ್ಗಟ್ಟಿಗೆ ಕನ್ನಡಿಗರು ಈ ಸಂದರ್ಭದಲ್ಲಿ ಒಟ್ಟಾಗಿ ಶಕ್ತಿಯನ್ನು ಪ್ರದರ್ಶಿಸಬೇಕು. 25ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಕನ್ನಡಿಗರೆಲ್ಲರೂ ನಮಗೆ ಬೆಂಬಲ ನೀಡಬೇಕು. ಡಿಸೆಂಬರ್ 31ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೇರೆಲ್ಲಾ ಸೇವೆಗಳಿಗೆ ವ್ಯತ್ಯಯವುಂಟಾಗಲಿದೆ ಎಂದು ಕನ್ನಡ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಇಂದು ಬೆಂಗಳೂರಿನಲ್ಲಿ ಘೋಷಿಸಿದ್ದಾರೆ. 

ಗಡಿಜಿಲ್ಲೆ ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿ ಎಂಇಎಸ್ ದಬ್ಬಾಳಿಕೆ, ದೌರ್ಜನ್ಯ ಹಿನ್ನೆಲೆಯಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಎಂಇಎಸ್ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಿದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಲು ಬಂದ್ ಗೆ ಕರೆ ನೀಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು. 

ಸುದ್ದಿಗೋಷ್ಠಿಯಲ್ಲಿ ವಾಟಾಳ್ ನಾಗರಾಜ್ ಮಾತನಾಡಿ, ಎಂಇಎಸ್​ ದಬ್ಬಾಳಿಕೆ ಹಾಗೂ ದೌರ್ಜನ್ಯ ಖಂಡಿಸಿ ವಿವಿಧ ಸಂಘಟನೆಗಳಿಂದ ಡಿ.31ರಂದು ಬೆಳಗ್ಗೆ 6 ರಿಂದ ಸಂಜೆ 6 ರ ವರೆಗೆ ಕರ್ನಾಟಕ ಬಂದ್ ಮಾಡಲಾಗುತ್ತದೆ. ಇದರಲ್ಲಿ ಕನ್ನಡಿಗರೆಲ್ಲರೂ ಒಟ್ಟಾಗಿ ನಮ್ಮ ಇಚ್ಛಾಶಕ್ತಿಯನ್ನು ತೋರಿಸಬೇಕು. ಬೆಂಗಳೂರು ಟೌನ್ ಹಾಲ್​ನಿಂದ ಕನ್ನಡಿಗರ ಶಕ್ತಿ ಪ್ರದರ್ಶನಗೊಳ್ಳಲಿದೆ ಎಂದರು.

ಅಧಿಕಾರ ಶಾಶ್ವತವಲ್ಲ, ಬಿಜೆಪಿ ನೇತೃತ್ವದ ಸರ್ಕಾರ ಈ ಸಂದರ್ಭದಲ್ಲಿ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು. ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು. ಕರ್ನಾಟಕದಲ್ಲಿ ಸರ್ಕಾರ, ಪೊಲೀಸರು ಇದ್ದಾರೆಯೇ? 70 ವರ್ಷದಿಂದ ಎಂಇಎಸ್​ನವರಿಂದ ನಿರಂತರ ದಬ್ಬಾಳಿಕೆ ನಡೆಯುತ್ತಿದೆ. ರಾಜ್ಯದಲ್ಲಿ ಕನ್ನಡ ಉಳಿದಿದ್ರೆ ಕನ್ನಡ ಪರ ಹೋರಾಟಗಾರರಿಂದ ಮಾತ್ರ. ಉದ್ಧವ್ ಠಾಕ್ರೆ ಸರ್ಕಾರವನ್ನು ರಾಷ್ಟ್ರಪತಿ ವಜಾ ಮಾಡಬೇಕು. ಉದ್ಧವ್ ಠಾಕ್ರೆ ದಬ್ಬಾಳಿಕೆ ನಮ್ಮ ರಾಜ್ಯದಲ್ಲಿ ನಡೆಯುವುದಿಲ್ಲ. ಬೆಳಗಾವಿಯ ರಾಜಕಾರಣಿಗಳೇ ಎಂಇಎಸ್ ಸಂಘಟನೆಗಳ ಕಾರ್ಯಕರ್ತರ ಏಜೆಂಟ್. ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟರೆ ಕನ್ನಡಿಗರಿಗೆ ಬೆಂಕಿ ಇಟ್ಟ ಹಾಗೆ ಎಂದು ವಾಟಾಳ್ ನಾಗರಾಜ್ ಆಕ್ರೋಶ ಹೊರಹಾಕಿದರು.

ಅಗತ್ಯ ವಸ್ತುಗಳು ಲಭ್ಯ: ಡಿಸೆಂಬರ್ 31ರಂದು ಕರ್ನಾಟಕ ಬಂದ್ ಇದ್ದರೂ ಜನರಿಗೆ ಹಾಲು, ಪೇಪರ್, ಆರೋಗ್ಯ ಸೇವೆಗಳು ಸೇರಿದಂತೆ ಅಗತ್ಯ ವಸ್ತುಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಇದಕ್ಕೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಇನ್ನು ಹೊಸ ವರ್ಷ ಮುನ್ನಾದಿನವಾಗಿದ್ದು, ಹೊಸ ವರ್ಷಾಚರಣೆ ಮಾಡುವವರು ಹೇಗಿದ್ದರೂ ಸಾಯಂಕಾಲವಲ್ಲವೇ ಮಾಡುವುದು, ಹಾಗಾಗಿ ಹೊಸ ವರ್ಷ ಸಂಭ್ರಮಾಚರಣೆಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದರು.

ಸರ್ಕಾರಕ್ಕೆ ಡಿ.29ರವರೆಗೆ ಗಡುವು: ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯನ್ನುಂಟುಮಾಡಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸಿ ಕನ್ನಡ ಸಾರ್ವಭೌಮತ್ವವನ್ನು ಕಾಪಾಡಲು ಸರ್ಕಾರಕ್ಕೆ ಕನ್ನಡಪರ ಸಂಘಟನೆಗಳು ಡಿಸೆಂಬರ್ 29ರವರೆಗೆ ಇನ್ನೂ ಒಂದು ಡೆಡ್ ಲೈನ್ ನೀಡಿವೆ. ಅಷ್ಟರೊಳಗೆ ಬೇಡಿಕೆ ಈಡೇರಿಸದಿದ್ದರೆ ಡಿಸೆಂಬರ್ 31ರಂದು ಬಂದ್ ಖಂಡಿತವಾಗಿರುತ್ತದೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ. 

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

“ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="117560"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!