ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ಮುಂಭಾಗದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಖೆಯ ವತಿಯಿಂದ ಕೋವಿಡ್-19 ಸಮಯದಲ್ಲಿ ಕರ್ತವ್ಯ ನಿರ್ವಹಿಸಿದ 100 ಶ್ರಮಿಕ ಪೌರ ಕಾರ್ಮಿಕರಿಗೆ ದಿನಸಿ ಕಿಟ್ಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ವಿತರಿಸಿದರು.
ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮ, ರೆಡ್ ಕ್ರಾಸ್ ಸಂಸ್ಥೆಯ ಕರ್ನಾಟಕ ಶಾಖೆಯ ಆಡಳಿತ ಮಂಡಳಿ ಸದಸ್ಯರಾದ ಶಿವರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….