ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಭೂಕಂಪನ: ಜನರು ಆತಂಕಗೊಳ್ಳದಿರಲು ಜಿಲ್ಲಾಧಿಕಾರಿ ಆರ್.ಲತಾ ಮನವಿ

ಚಿಕ್ಕಬಳ್ಳಾಪುರ: 2.9 ಮತ್ತು 3.0ರ ತೀವ್ರತೆಯ ಎರಡು ಭೂಕಂಪನಗಳು ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 22ನೇ ಡಿಸೆಂಬರ್ ಮುಂಜಾನೆಯಲ್ಲಿ ಸಂಭವಿಸಿರುವುದು ದಾಖಲಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರವು ಸ್ಪಷ್ಟಪಡಿಸಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಹಲವು ಗ್ರಾಮಗಳಲ್ಲಿ ಇಂದು  ಮುಂಜಾನೆ 2 ಭಾರಿ  ಭೂಕಂಪನದ  ಅನುಭವವಾಗಿ ರಿಕ್ಟರ್ ಮಾಪನದಲ್ಲಿ 2.9 ಮತ್ತು  3.0 ತೀವ್ರತೆಯ ಭೂಕಂಪನ ದಾಖಲಾಗಿದ್ದ  ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು  ತಾಲೂಕಿನ ಬಂಡಹಳ್ಳಿ ಮತ್ತು ಶೆಟ್ಟೆಗೆರೆ ಗ್ರಾಮಗಳಿಗೆ ಭೇಟಿ ನೀಡಿ ಸ್ಥಳೀಯ ಜನರಿಗೆ  ಧೈರ್ಯ ತುಂಬಿ ಮಾತನಾಡಿದರು.

ಒಂದು ಭೂಕಂಪನದ ಕೇಂದ್ರಸ್ಥಾನವು  ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಡಿಕಲ್ ಗ್ರಾಮ ಪಂಚಾಯತಿಯಿಂದ ಸುಮಾರು 1.4 ಕಿಮೀ ದೂರದಲ್ಲಿ  ದಾಖಲಾಗಿದೆ. ಇದು ಸುಮಾರು 2.9ರ ತೀವ್ರತೆಯನ್ನು ಹೊಂದಿದ್ದು 11 ಕೀಮೀ ದೂರದ ಭೂಗರ್ಭದಲ್ಲಿ ಕೇಂದ್ರೀಕೃತವಾಗಿದೆ ಹಾಗೂ ಮತ್ತೊಂದು ಭೂಕಂಪನವು ಚಿಕ್ಕಬಳ್ಳಾಪುರ ತಾಲ್ಲೂಕಿನ ಅಡ್ಡಗಲ್ಲು ಗ್ರಾಮ ಪಂಚಾಯತಿ ವ್ಯಾಪ್ತಿಯ ಭೋಗಪರ್ತಿ ಗ್ರಾಮಕ್ಕೆ 1.23 ಕಿಮೀ ದೂರದಲ್ಲಿ ಮುಂಜಾನೆ 7.15ಕ್ಕೆ ಸಂಭವಿಸಿದ್ದು ಇದರ ತೀವ್ರತೆಯು 3.00ರಷ್ಟಿದ್ದು ಇದು ಭೂಗರ್ಭದ ಸುಮಾರು 23 ಕಿಮೀ ದೂರದಲ್ಲಿ ಕೇಂದ್ರೀಕೃತವಾಗಿದೆಯೆಂದು ಕರ್ನಾಟಕ  ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರವು ತಿಳಿಸಿದೆ ಎಂದರು. 

ಭೂಕಂಪನದ ತೀವ್ರತೆಯ ನಕಾಶೆಯನ್ವಯ  ಈ ಭೂಕಂಪಗಳ ತೀವ್ರತೆಯು ಅತ್ಯಂತ ಕನಿಷ್ಟ ಪ್ರಮಾಣದ್ದಾಗಿದ್ದು ಸುಮಾರು 10ರಿಂದ 15 ಕಿಮೀ ವ್ಯಾಪ್ತಿಯವರೆಗೆ ಭೂಕಂಪನದ ಅನುಭವವಾಗಿರಬಹುದೆಂದು ಅಂದಾಜಿಸಲಾಗಿದೆ. ಇದರ ಪರಿಣಾಮದಿಂದಾಗಿ ಭೂಮಿಯು ಅಲುಗಾಡಿದ ಅನುಭವವಾಗಿದ್ದರೂ ಸಹ ಈ ಪ್ರಮಾಣದ ಭೂಕಂಪನವು ಸ್ಥಳೀಯ ಸಮುದಾಯಕ್ಕೆ ಯಾವುದೇ ರೀತಿಯಲ್ಲಿಯೂ ಅಪಾಯಕಾರಿಯಲ್ಲವೆಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರವು ತಿಳಿಸಿದ್ದು ಇದರಿಂದ ಜನರು ಗಾಬರಿಗೊಳ್ಳುವ ಹಾಗೂ ಹೆಚ್ಚಿನ ಆತಂಕಗೊಳ್ಳುವ ಅವಶ್ಯಕತೆಯಿಲ್ಲವೆಂದು ಎಂದು ಜಿಲ್ಲಾಧಿಕಾರಿಗಳು ತಿಳಿಸಿ ಸ್ಥಳೀಯರಿಗೆ ಮನೋಸ್ಥೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ತಹಸಿಲ್ದಾರ್ ಗಣಪತಿ ಶಾಸ್ತ್ರೀ  ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ  ಹರ್ಷವರ್ಧನ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು  ಮತ್ತು  ಸಿಬ್ಬಂದಿ  ಹಾಜರಿದ್ದರು. ಈ ವೇಳೆ ಆ ಗ್ರಾಮಗಳಲ್ಲಿ ವಿವಿಧ ಮನೆಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನೀವು ಮತ್ತು ಸಿದ್ದರಾಮಯ್ಯ ಅವರು ದುಬಾರಿ ವಾಚ್ ಧರಿಸಿದ್ದರ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಕೇಳಿದಾಗ, “ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ

[ccc_my_favorite_select_button post_id="116998"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!